ಆರ್‌ಸಿಬಿ ವಿರುದ್ಧ ಕ್ರಿಮಿನಲ್ ಕೇಸ್ – ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ನಿರ್ಧಾರ
ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳೇನು?

ಬೆಂಗಳೂರು ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ಮಹತ್ವದ ತೀರ್ಮಾನ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಆರ್‌ಸಿಬಿ, ಡಿಎನ್ಎ ಹಾಗೂ ಕೆಎಸ್ಸಿಎ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಹಾಗೂ ಪೊಲೀಸರ ವಿರುದ್ಧವೂ ಇಲಾಖಾ ತನಿಖೆಗೆ ಸಂಪುಟ ನಿರ್ಧರಿಸಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಮತ ಕಳವು ನಡೆದಿದೆ.. ಶೀಘ್ರವೇ ಸಾಕ್ಷ್ಯ ಒದಗಿಸುತ್ತೇನೆ! – ಹೊಸ ಬಾಂಬ್ ಸಿಡಿಸಿದ ರಾಹುಲ್ ಗಾಂಧಿ!
RCB ತಂಡ ಈಗ ಸಂಕಷ್ಟಕ್ಕೆ ಸಿಲುಕಿದೆ. 17 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ಸಿಬಿ ಬೆಂಗಳೂರಲ್ಲಿ ಸಂಭ್ರಮಾಚರಣೆ ನಡೆಸಿದಾಗ ನಡೆಯಬಾರದ ಘಟನೆ ನಡೆದುಹೋಗಿತ್ತು. ಇದರ ಪರಿಣಾಮ ಈಗ ಆರ್‌ಸಿಬಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಆರ್‌ಸಿಬಿ ಅಲ್ಲದೆ, ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲಿಸಲು ಕೂಡ ಸಚಿವ ಸಂಪುಟ ತೀರ್ಮಾನಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್‌ಸಿಬಿ, ಡಿಎನ್ಎ ಹಾಗೂ ಕೆಎಸ್ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.
ಇದೀಗ ಸಚಿವ ಸಂಪುಟ ಕ್ರಿಮಿನಲ್ ಕೇಸ್ಗೆ ತೀರ್ಮಾನ ಕೈಗೊಂಡಿರುವುದರಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎ.ಶಂಕರ್, ಮಾಜಿ ಖಜಾಂಚಿ ಜಯರಾಂ, ಆರ್‌ಸಿಬಿ ತಂಡದ ರಾಜೇಶ್ ಮೆನನ್, ಡಿಎನ್ಎ ನೆಟ್ವರ್ಕ್ ಲಿಮಿಟೆಡ್ ಎಂಡಿ ವೆಂಕಟ್ ವರ್ಧನ್ , ಡಿಎನ್ಎ ನೆಟ್ವರ್ಕ್ ಲಿಮಿಟೆಡ್ ಉಪಾಧ್ಯಕ್ಷ ಸುನೀಲ್ ಮಾಥೂರ್ ಇವರಿಗೆ ಸಂಕಷ್ಟ ಎದುರಾಗಲಿದೆ. ಬೆಂಗಳೂರು ನಗರ ಮಾಜಿ ಪೊಲೀಸ್ ಕಮಿಷನರ್ ಬಿ.ದಯಾನಂದ್, ಐಪಿಎಸ್ ಅಧಿಕಾರಿಗಳಾದ ವಿಕಾಸ್ ಕುಮಾರ್ ವಿಕಾಸ್, ಶೇಖರ್, ಕಬ್ಬನ್ ಪಾರ್ಕ್ ಸಬ್ ಡಿವಿಷನ್ ಎಸಿಪಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಠಾಣೆಯ ಪಿಐ ಗಿರೀಶ್ ವಿರುದ್ಧವೂ ಪ್ರಕರಣ ದಾಖಲಾಗಲಿದೆ.

ನೋಡಿರಿ

