ಸಿ.ಟಿ ರವಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ದಿಢೀರ್ ಬುಲಾವ್ – ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಫಿಕ್ಸ್..?
ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ತಿಂಗಳಾಗ್ತಾ ಬಂತು. ಆದರೆ ಬಿಜೆಪಿಯಲ್ಲಿ ಮಾತ್ರ ಈವರೆಗೂ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡಿಲ್ಲ. ಮತ್ತೊಂದೆಡೆ ರಾಜ್ಯಾಧ್ಯಕ್ಷ ಸ್ಥಾನವನ್ನೂ ಬದಲಾವಣೆ ಮಾಡಬಹುದು ಎನ್ನಲಾಗುತ್ತಿದೆ. ಈ ನಡುವೆ ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಬದಲಾವಣೆ ಹೊಸ ಸಂಚಲನ ಸೃಷ್ಟಿಸಿದೆ.
ಇದನ್ನೂ ಓದಿ : ರಾಹುಲ್ ಗಾಂಧಿ ಮದುವೆ ಯಾವಾಗ ಎಂದು ಅಮ್ಮನಿಗೆ ಪ್ರಶ್ನೆ- ಸೋನಿಯಾ ಗಾಂಧಿ ಉತ್ತರ ಹೇಗಿತ್ತು?
ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆದ್ದ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆಗೆ ಒಂದು ವಾರ ಹೈಡ್ರಾಮಾ ನಡೆದಿತ್ತು. ಆದರೆ ಬಿಜೆಪಿಗೆ(Karnataka BJP) ಯಾರು ರಾಜ್ಯಾಧ್ಯಕ್ಷರಾಗುತ್ತಾರೆ? ಯಾರು ವಿಪಕ್ಷ ನಾಯಕರಾಗುತ್ತಾರೆ? ಎನ್ನುವುದಕ್ಕೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಈ ಬಾರಿಯ ವಿಧಾನಮಂಡಲ ಅಧಿವೇಶನವೂ ವಿಪಕ್ಷನಾಯಕರಿಲ್ಲದೇಯೇ ಮುಗಿದು ಹೋಗಿದೆ. ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿ (CT Rav) ಅವರನ್ನ ಬಿಡುಗಡೆ ಮಾಡಿರುವುದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇದರ ಮಧ್ಯೆ ಬಿಜೆಪಿಯಲ್ಲಿ ದೊಡ್ಡ ಬೆಳವಣಿಗೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ಕೊಟ್ಟಿರುವ ಹೈಕಮಾಂಡ್, ಇದೀಗ ಸಿಟಿ ರವಿ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ.
ಇಂದು(ಆಗಸ್ಟ್ 01) ನವದೆಹಲಿಗ ಬರುವಂತೆ ಮಾಜಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ಸಿ.ಟಿ ರವಿ ಇಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಗೆ ತೆರಳಲಿದ್ದು, ಇಂದು ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಸಿಟಿ.ರವಿಗೆ ಕೊಕ್ ನೀಡಿದ ಬಳಿಕ ರಾಷ್ಟ್ರೀಯ ಪದಾಧಿಕಾರಿ ಪಟ್ಟಿಯಲ್ಲಿ ಕರ್ನಾಟಕದಿಂದ ಬಿ.ಎಲ್.ಸಂತೋಷ್ ಹೊರತು ಪಡಿಸಿದರೆ ಇನ್ನೊಬ್ಬರ ಹೆಸರಿಲ್ಲ, ಕರ್ನಾಟಕಕ್ಕೆ ಮಾನ್ಯತೆಯೂ ಇಲ್ಲ. ಈ ಚರ್ಚೆ ಜೊತೆಗೆ ಸಿ.ಟಿ.ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಾರೆ ಎನ್ನುವ ಕುತೂಹಲವೂ ಹುಟ್ಟಿದೆ. ಇದೇ ಕಾರಣಕ್ಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ.
ಇತ್ತೀಚೆಗಷ್ಟೇ ಸಿ.ಟಿ.ರವಿ. ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದರು. ಅಲ್ಲದೇ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಸಹ ಸಿ.ಟಿ ರವಿ ಅವರಿಗೆ ಅಧ್ಯಕ್ಷ ಸ್ಥಾನ ಎಂದು ಬಹಿರಂಗವಾಗಿಯೇ ಹೇಳಿದ್ದರು. ಇದೆಲ್ಲರ ಮಧ್ಯೆ ಇದೀಗ ಹೈಕಮಾಂಡ್ನಿಮದ ಬುಲಾವ್ ಬಂದಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.