ಕಾಂಗ್ರೆಸ್ ಗ್ಯಾರಂಟಿಗಳನ್ನೇ ಬಂಡವಾಳ ಮಾಡಿಕೊಂಡ ಸೈಬರ್ ಕಳ್ಳರು – ಸೇವಾಸಿಂಧು ಹೆಸರಲ್ಲಿ ಫೇಕ್ ಲಿಂಕ್ ಕಳಿಸಿ ಹಣ ಲೂಟಿ

ಕಾಂಗ್ರೆಸ್ ಗ್ಯಾರಂಟಿಗಳನ್ನೇ ಬಂಡವಾಳ ಮಾಡಿಕೊಂಡ ಸೈಬರ್ ಕಳ್ಳರು – ಸೇವಾಸಿಂಧು ಹೆಸರಲ್ಲಿ ಫೇಕ್ ಲಿಂಕ್ ಕಳಿಸಿ ಹಣ ಲೂಟಿ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದ್ರೂ ಅವರು ನೀಡಿದ್ದ 5 ಗ್ಯಾರಂಟಿಗಳ ಕಾವು ಮಾತ್ರ ಆರಿಲ್ಲ. ಅದರಲ್ಲೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯೋಕೆ, ಗೃಹಲಕ್ಷ್ಮಿಯ 2 ಸಾವಿರ ಹಣ ಪಡೆಯೋಕೆ ಹಾಗೂ ಗೃಹಜ್ಯೋತಿಯ 200 ಯುನಿಟ್ ವಿದ್ಯುತ್ ಫ್ರೀ ಅವಕಾಶ ಸದುಪಯೋಗ ಪಡಿಸಿಕೊಳ್ಳೋಕೆ ಜನ ಕಾತರರಾಗಿದ್ದಾರೆ. ಆದರೆ ಅರ್ಜಿ ಸಲ್ಲಿಸೋರನ್ನೇ ಸೈಬರ್ ಕಳ್ಳರು ಟಾರ್ಗೆಟ್ ಮಾಡಿದ್ದಾರೆ.

ಹೌದು. ಕಾಂಗ್ರೆಸ್ ಗ್ಯಾರಂಟಿಗೆ ಅರ್ಜಿ ಸಲ್ಲಿಕೆ ಮಾಡಲು ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಫೇಕ್ ಲಿಂಕ್‌ಗಳನ್ನು ಹರಿಯಬಿಡುತ್ತಿದ್ದಾರೆ. ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿ, ಬ್ಯಾಂಕ್ ಖಾತೆ ವಿವರಗಳನ್ನು ನೀಡಿದರೆ, ಬ್ಯಾಂಕ್‌ನಲ್ಲಿರುವ ದುಡ್ಡು ಸೈಬರ್ ಚೋರರ ಪಾಲಾಗೋದು ಖಚಿತ. ಹೀಗಾಗಿ ಜನ ತುಂಬಾ ಎಚ್ಚರಿಕೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಸಿಕ್ಕ ಸಿಕ್ಕ ಲಿಂಕ್‌ಗಳಲ್ಲಿ ಸಲ್ಲಿಕೆ ಮಾಡಬಾರದು ಎನ್ನುವ ಎಚ್ಚರಿಕೆಯನ್ನು ರವಾನೆ ಮಾಡಿದ್ದಾರೆ.

ಇದನ್ನೂ ಓದಿ : ಶಕ್ತಿ ಯೋಜನೆಯ ಸ್ಮಾರ್ಟ್‌ ಕಾರ್ಡ್‌ ಅರ್ಜಿ ಸಲ್ಲಿಕೆಗೆ ಡೇಟ್‌ ಫಿಕ್ಸ್‌! – ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಸೇವಾಸಿಂಧು ಫೇಕ್ ಲಿಂಕ್ ಬಗ್ಗೆ ಸರ್ಕಾರ ಕೂಡ ಈ ವಿಚಾರದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು. ಇಲ್ಲದೇ ಇದ್ರೆ ಜನರಿಗೆ ತೊಂದರೆಯಾಗಲಿದೆ. ಈಗಾಗಲೇ ಸಾಕಷ್ಟು ಫೇಕ್ ಲಿಂಕ್‌ಗಳ ಜಾಲ ಕೂಡ ಹರಿದಾಡುತ್ತಿದೆ ಎಂದು ಸೈಬರ್ ತಜ್ಞರಾದ ಶುಭಾ ಮಂಗಳಾ ಎಚ್ಚರಿಸಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಎಲ್ಲೆಲ್ಲಿ ಮಾಡಬಹುದು, ಯಾವ ಲಿಂಕ್‌ನಲ್ಲಿ ಮಾಡಬೇಕು ಎನ್ನುವುದನ್ನು ಸರ್ಕಾರ ಪ್ರಕಟಿಸಿದೆ. ಹೀಗಾಗಿ ಜನ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ತಜ್ಞರು ತಿಳಿಸಿದ್ದಾರೆ.

suddiyaana