ಮುಂದಿನ 24 ಗಂಟೆಗಳಲ್ಲಿ ಬಿಪರ್ಜೋಯ್ ಚಂಡಮಾರುತ ತೀವ್ರ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

ಮುಂದಿನ 24 ಗಂಟೆಗಳಲ್ಲಿ ಬಿಪರ್ಜೋಯ್ ಚಂಡಮಾರುತ ತೀವ್ರ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ಬಿಪರ್ಜೋಯ್ ಚಂಡಮಾರುತ ಪರಿಣಾಮ ಕರ್ನಾಟಕ, ಮುಂಬೈ, ಗೋವಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ಇದನ್ನೂ ಓದಿ:ಅಸ್ತಮಾ ನಿವಾರಣೆಗೆ ವಿಶೇಷ ಪ್ರಸಾದ! – ಜೀವಂತ ಮೀನು ನುಂಗಲು ವಿದೇಶಗಳಿಂದಲೂ ಬರುತ್ತಾರೆ ಜನ   

24 ಗಂಟೆಗಳಲ್ಲಿ ಚಂಡಮಾರುತದ ತೀವ್ರತೆ ಹೆಚ್ಚಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದೆ. ಅತ್ಯಂತ ತೀವ್ರವಾದ ಚಂಡಮಾರುತವು ಗೋವಾದ ಪಶ್ಚಿಮ-ನೈಋತ್ಯಕ್ಕೆ 840 ಕಿಲೋಮೀಟರ್ ಮತ್ತು ಮುಂಬೈನಿಂದ 870 ಕಿಮೀ ಪಶ್ಚಿಮ-ನೈಋತ್ಯದಲ್ಲಿ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ನೆಲೆಗೊಂಡಿದೆ ಎಂದು ಐಎಂಡಿ ಹೇಳಿದೆ.

ಮುಂದಿನ 36 ಗಂಟೆಗಳಲ್ಲಿ ಮತ್ತಷ್ಟು ಕ್ರಮೇಣವಾಗಿ ತೀವ್ರಗೊಳ್ಳುತ್ತದೆ ಮತ್ತು 2 ದಿನಗಳಲ್ಲಿ ಉತ್ತರ-ವಾಯುವ್ಯಕ್ಕೆ ಅಪ್ಪಳಿಸಲಿದೆ. ಅರಬ್ಬಿ ಸಮುದ್ರದಲ್ಲಿ ಇಂತಹ ಚಂಡಮಾರುತ ಪೀಡಿತ ಪ್ರದೇಶಗಳಿಗೆ ತೆರಳದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಸೂಚಿಸಿದೆ ಎಂದು ಐಎಂಡಿ ಟ್ವೀಟ್ ಮಾಡಿ ಮಾಹಿತಿ ನೀಡಿದೆ.

suddiyaana