ರಣಚಂಡಿ ಅವತಾರ ತಾಳಿದ ಬಿಪರ್ ಜೋಯ್ ಚಂಡಮಾರುತ – ಅಧಿಕಾರಿಗಳಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

ರಣಚಂಡಿ ಅವತಾರ ತಾಳಿದ ಬಿಪರ್ ಜೋಯ್ ಚಂಡಮಾರುತ – ಅಧಿಕಾರಿಗಳಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

ಬಿಪರ್ ಜೋಯ್ ಚಂಡಮಾರುತದ ಎಫೆಕ್ಟ್ ಈಗಾಗಲೇ ಹಲವು ರಾಜ್ಯಗಳಲ್ಲಿ ಅಬ್ಬರ ಶುರು ಮಾಡಿದೆ. ಕರಾವಳಿ ಭಾಗಗಳಲ್ಲಿ ಅಲೆಗಳ ಅಬ್ಬರಕ್ಕೆ ಅಲ್ಲೋಲ ಕಲ್ಲೋಲವಾಗುತ್ತಿದೆ. ಗುಜರಾತ್, ಮಹಾರಾಷ್ಟ್ರ, ಕೇರಳ, ಕರ್ನಾಟಕದಲ್ಲಿ ವ್ಯಾಪಕ ಪರಿಣಾಮ ಬೀರುತ್ತಿದೆ. ಹೀಗಾಗಿ ಹಾನಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಉನ್ನತಮಟ್ಟದ ಸಭೆ ನಡೆಸಿದ್ದಾರೆ.

ನೈಋತ್ಯ ಮುಂಗಾರಿನ ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ‘ಬಿಪರ್ ಜೋಯ್’ ಚಂಡಮಾರುತದ ಅಬ್ಬರ ಜೋರಾಗಿದ್ದು, ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದೆ. ಅದರಲ್ಲೂ ಪ್ರಧಾನಿ ಮೋದಿಯವರ ತವರೂರಾದ ಗುಜರಾತ್ ನಲ್ಲಿ ಹೆಚ್ಚಿನ ಪರಿಣಾಮ ಬೀಡುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ರು. ಮುಂಗಾರು ವಿಳಂಬ ಹಾಗೂ ಸೈಕ್ಲೋನ್ ಪರಿಸ್ಥಿತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದ್ರು. ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ರು. ಇನ್ನು ನಾಳೆ ಸೈಕ್ಲೋನ್ ಪೀಡಿತ ರಾಜ್ಯಗಳ ಸಚಿವರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ : ಜುಲೈ 1 ರಿಂದ ಅಮರನಾಥ ಯಾತ್ರೆ ಆರಂಭ – ಹಲ್ವಾ, ದೋಸೆ, ಪೂರಿಗಿಲ್ಲ ಅವಕಾಶ!

ಗುಜರಾತ್ ರಾಜ್ಯದ ಕರಾವಳಿ ಪ್ರದೇಶಗಳಾದ ಸೌರಾಷ್ಟ್ರ ಮತ್ತು ಕಚ್ ಪ್ರದೇಶಕ್ಕೆ ಭಾರತೀಯ ಹವಾಮಾನ ಇಲಾಖೆ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಈ ಪ್ರದೇಶಗಳಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬುಧವಾರದ ತನಕ ಇದೇ ಪರಿಸ್ಥಿತಿ ಇರಲಿದೆ ಎಂದು ಅಂದಾಜಿಸಲಾಗಿದೆ. ಜೂನ್ 13 ರಿಂದ 15ರ ತನಕ ಕಚ್, ಜಾಮ್‌ ನಗರ, ಮೊರ್ಬಿ, ಸೋಮನಾಥ್, ಪೋರ್ ಬಂದರ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರಿ ಗಾಳಿಯ ಜೊತೆ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ ಸುಮಾರು 150 ಕಿ. ಮೀ. ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಗುಜರಾತ್‌ನಲ್ಲಿ ಚಂಡಮಾರುತ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಸಹ ಸಭೆ ನಡೆಸಿದ್ದಾರೆ.

ಈಗಾಗಲೇ ಬಿಪರ್ ಜೋಯ್ ಚಂಡಮಾರುತದ ಪರಿಣಾಮವಾಗಿ ಮಹಾರಾಷ್ಟ್ರ ಮತ್ತು ಗುಜರಾತ್‌ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮುಂಬೈನ ಸಮುದ್ರ ತೀರಕ್ಕೆ ಭಾರೀ ಗಾತ್ರದ ಅಲೆಗಳು ಬಂದು ಅಪ್ಪಳಿಸುತ್ತಿವೆ. ಪ್ರತಿಕೂಲ ಹವಾಮಾನದ ಕಾರಣ ಮುಂಬೈ ವಿಮಾನ ನಿಲ್ದಾಣದ ರನ್‌ ವೇ ಸಹ ಮುಚ್ಚಲಾಗಿದೆ. ಚಂಡಮಾರುತದ ಪರಿಣಾಮವಾಗಿ ಗುಜರಾತ್‌ನ ಕರಾವಳಿಗೆ ಭಾರಿ ಗಾತ್ರದ ಅಲೆಗಳು ಬಂದು ಅಪ್ಪಳಿಸುತ್ತಿವೆ. ಮಹಾರಾಷ್ಟ್ರದ ಥಾಣೆ, ರಾಯಗಢ, ಮುಂಬೈ ಮತ್ತು ಫಾಲ್ಗಾರ್‌ಗಳಲ್ಲಿ ಚಂಡಮಾರುತದ ಪರಿಣಾಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅರಬ್ಬಿ ಸಮು​ದ್ರ​ದಲ್ಲಿ ಸೃಷ್ಟಿ​ಯಾ​ಗಿರುವ ‘ಬಿಪರ್ ಜೋಯ್ ಚಂಡ​ಮಾ​ರುತ ಗುಜ​ರಾ​ತ್‌ನ ಕಛ್‌ ಹಗೂ ಪಾಕಿ​ಸ್ತಾ​ನದ ಕರಾಚಿ ನಡುವೆ ಜೂನ್ 15ರ ವೇಳೆಗೆ ಅಪ್ಪ​ಳಿ​ಸುವ ಸಾಧ್ಯತೆ ಇದೆ ಎಂದು ಭಾರ​ತೀ​ಯ ಹವಾ​ಮಾನ ಇಲಾಖೆ ತಿಳಿಸಿದೆ.

 

suddiyaana