ಮೊಂತಾ ಚಂಡಮಾರುತ ಎಫೆಕ್ಟ್! – ಆಂಧ್ರ, ಒಡಿಶಾ ಕರಾವಳಿ, ಕರ್ನಾಟಕದಲ್ಲಿ ಮುಂದಿನ 6 ಗಂಟೆಗಳಲ್ಲಿ ಭಾರಿ ಮಳೆ!

ಮೊಂತಾ ಚಂಡಮಾರುತದ ಹಿನ್ನಲೆ ದೇಶದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಇದೀಗ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸಿದ್ದು, ಆಂಧ್ರಪ್ರದೇಶ, ಒಡಿಶಾದ ಕರಾವಳಿ, ಕರ್ನಾಟಕದ ಹಲವು ಭಾಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಆರು ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ದೆಹಲಿಯಲ್ಲಿ ಹದಗೆಟ್ಟ ವಾಯು ಮಾಲಿನ್ಯ – ದೆಹಲಿಯ ಕೆಲವು ಭಾಗಗಳಲ್ಲಿ ಮೋಡ ಬಿತ್ತನೆ
ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯಾದ್ಯಂತ ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಗಂಟೆಗೆ 110 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು. ಮುಂದಿನ 6 ಗಂಟೆಗಳಲ್ಲಿ ಅದರ ತೀವ್ರತೆಯನ್ನು ಕಾಯ್ದುಕೊಳ್ಳಲಿದೆ. 6 ಗಂಟೆಯ ನಂತರ ದುರ್ಬಲಗೊಳ್ಳುವ ಸಾಧ್ಯತೆಯಿದೆ. ಮುಂದಿನ 36 ಗಂಟೆಗಳಲ್ಲಿ ಇದು ಪೂರ್ವ-ಮಧ್ಯ ಅರಬ್ಬೀ ಸಮುದ್ರದಾದ್ಯಂತ ಈಶಾನ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಕರಾವಳಿ ವೀಕ್ಷಣಾಲಯಗಳು, ಸ್ವಯಂಚಾಲಿತ ಹವಾಮಾನ ಕೇಂದ್ರಗಳು, ಹಡಗುಗಳು ಮತ್ತು ಬೋಯ್ಗಳು ಮತ್ತು ಉಪಗ್ರಹಗಳ ಜೊತೆಗೆ ಮಚಲಿಪಟ್ಟಣಂ ಮತ್ತು ವಿಶಾಖಪಟ್ಟಣದಲ್ಲಿರುವ ಡಾಪ್ಲರ್ ಹವಾಮಾನ ರಾಡಾರ್ ಮೂಲಕ ಈ ವ್ಯವಸ್ಥೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಕಾಕಿನಾಡ, ಕೃಷ್ಣ, ಎಲೂರು, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಮತ್ತು ಚಿಂತೂರು ಮತ್ತು ರಾಮಪಚೋಡವರಂ ಭಾಗಗಳು ಚಂಡಮಾರುತದ ಗರಿಷ್ಠ ಪರಿಣಾಮವನ್ನು ಕಾಣುತ್ತಿವೆ.
ಮಂಗಳವಾರ ರಾತ್ರಿ 8:30 ರಿಂದ ಬುಧವಾರ ಬೆಳಿಗ್ಗೆ 6 ಗಂಟೆಯವರೆಗೆ ಈ ಏಳು ಜಿಲ್ಲೆಗಳಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿತ್ತು. ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಗೆ ಮಾಹಿತಿ ನೀಡಿದ್ದು ನೆಲ್ಲೂರು ಜಿಲ್ಲೆಯಲ್ಲಿ ಇದುವರೆಗೆ ಅತಿ ಹೆಚ್ಚು ಮಳೆಯಾಗಿದೆ. ಮೊಂಥಾ ಎದುರಿಸಲು 22 ಎನ್ಡಿಆರ್ಎಫ್ ತಂಡಗಳ ನಿಯೋಜನೆ ಮಾಡಲಾಗಿದ್ದು ಕರಾವಳಿ ಪ್ರದೇಶದಲ್ಲಿರುವ ಜನರನ್ನು ಸ್ಥಳಾಂತರ ಮಾಡಲಾಗಿದೆ. 100ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಆಂಧ್ರ ಮತ್ತು ಒಡಿಶಾ ಕರಾವಳಿ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನೋಡಿರಿ

