ಇಂದು ಕೋರ್ಟ್ಗೆ ಹಾಜರಾಗಲಿರುವ ಡಿ ಗ್ಯಾಂಗ್ – ದೋಷಾರೋಪ ಹೊರಿಸಲಿರುವ ಕೋರ್ಟ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇಂದು ದರ್ಶನ್ & ಗ್ಯಾಂಗ್ ಕೋರ್ಟ್ಗೆ ಹಾಜರಾಗಲಿದ್ದಾರೆ. ಸೆಷನ್ಸ್ ನ್ಯಾಯಾಲಯವು, ಆರೋಪಿಗಳ ವಿರುದ್ಧದ ದೋಷಾರೋಪಣೆ ನಿಗದಿಪಡಿಸಲಿದೆ.
ಇದನ್ನೂ ಓದಿ:ಏಷ್ಯಾಕಪ್ ಫೈನಲ್ ಪ್ರವೇಶಿಸಿದ ಭಾರತ – ಬಾಂಗ್ಲಾ ಬೌಲರ್ಗಳ ಬೆವರಿಳಿಸಿದ ಅಭಿಷೇಕ್ ಶರ್ಮಾ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿ ಆರೋಪಿಗಳು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು. ಇಂದು 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ. ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾದ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ1ಆರೋಪಿ ಪವಿತ್ರಾಗೌಡ ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ. ಈ ವೇಳೆ ನ್ಯಾಯಾದೀಶರು ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ ಎಂದು ಕೇಳಲಿದ್ದಾರೆ.
ಇಲ್ಲ ಸ್ವಾಮಿ ಇದೆಲ್ಲಾ ಸುಳ್ಳು ವಿಚಾರಣೆ ನಡೆಯಲಿ ಅಂತಾ ಆರೋಪಿಗಳು ಹೇಳಿಕೆ ನೀಡುವ ಸಾಧ್ಯತೆ ಇದೆ. ಇದೇ ರೀತಿ ಎಲ್ಲಾ 17 ಆರೋಪಿಗಳನ್ನ ಕರೆದು ಅವರ ಮೇಲೆ ದಾಖಲಾಗಿರೊ ಸೆಕ್ಷನ್ ಬಗ್ಗೆ ನ್ಯಾಯಾಧೀಶರು ವಿವರಣೆ ಕೇಳಲಿದ್ದಾರೆ. ಈ ಪ್ರಕ್ರಿಯೆ ಮುಗಿದ ಮೇಲೆ ದೊಷಾರೋಪ ನಿಗದಿ ಬಳಿಕ ಮುಂದೊಂದು ದಿನ ಟ್ರಯಲ್ಗೆ ದಿನಾಂಕ ನ್ಯಾಯಾಧೀಶರು ನಿಗದಿಪಡಿಸಲಿದ್ದಾರೆ.
ಮತ್ತೊಂದೆಡೆ ಜೈಲಿನಲ್ಲಿ ಹಾಸಿಗೆ ಹಾಗೂ ದಿಂಬು ನೀಡಬೇಕಾದ ಆದೇಶ ಪಾಲನೆಯಾಗುತ್ತಿಲ್ಲ ಎಂದು ದರ್ಶನ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇಂದು ಹಾಸಿಗೆ ತಲೆದಿಂಬು ನೀಡುವ ವಿಚಾರ ಕೂಡ ಚರ್ಚೆಗೆ ಬರುವ ಸಾಧ್ಯತೆ ಇದೆ.

ನೋಡಿರಿ

