ಧರ್ಮಸ್ಥಳ ಷಡ್ಯಂತ್ರದ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಇದ್ದಾನೆ – ಹುನ್ನಾರಕ್ಕೆ ಪ್ಲ್ಯಾನ್ ಮಾಡಿದ್ದವರನ್ನ ಅರೆಸ್ಟ್ ಮಾಡಿ – ಗಾಲಿ ಜನಾರ್ದನ್ ರೆಡ್ಡಿ

ಧರ್ಮಸ್ಥಳದಲ್ಲಿ ನಡೆಯುತ್ತಿರೋ ಬೆಳವಣಿಗೆ ಬಗ್ಗೆ ಗಾಲಿ ಜನಾರ್ದನ್ ರೆಡ್ಡಿ ಮಾತನಾಡಿದ್ದಾರೆ. ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ಸಿಬಿಐ ಮತ್ತು ಎನ್ಐಎ ತನಿಖೆಗೆ ಆಗ್ರಹಿಸಿದ ಅವರು, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಸಂಸ್ಥೆಗಳಿಂದ ಸತ್ಯ ಹೊರಬರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಈ ಷಡ್ಯಂತ್ರದ ಹಿಂದೆ ಎಡಪಂಥೀಯ ಶಕ್ತಿಗಳಿವೆ ಎಂದು ಅವರು ಆರೋಪಿಸಿದ್ದಾರೆ.
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಆರೋಪಿಸಿದ್ದಾರೆ. ಸಿಬಿಐ ಮತ್ತು ಎನ್ಐಎ ತನಿಖೆಗೆ ಆಗ್ರಹಿಸಿದ ಅವರು, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಸಂಸ್ಥೆಗಳಿಂದ ಸತ್ಯ ಹೊರಬರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಈ ಷಡ್ಯಂತ್ರದ ಹಿಂದೆ ಎಡಪಂಥೀಯ ಶಕ್ತಿಗಳಿವೆ ಎಂದು ಅವರು ಆರೋಪಿಸಿದ್ದಾರೆ.
ಧರ್ಮಸ್ಥಳದ ಬಗ್ಗೆ ದುಷ್ಟ ಎಡಪಂಥೀಯ ಶಕ್ತಿಗಳಿಂದ ಅಪಪ್ರಚಾರವಾಗುತ್ತಿದೆ. ಎಡಪಂಥೀಯ ಮನೋಭಾವನೆವುಳ್ಳ ದುಷ್ಟ ಶಕ್ತಿಗಳೆಲ್ಲ ಸೇರಿಕೊಂಡಿವೆ. ಈ ಹುನ್ನಾರ ಇಲ್ಲಿಗೆ ಕೊನೆಗಾಣಿಸಬೇಕು. ಮುಸುಕುಧಾರಿ 13 ಸ್ಥಳಗಳಲ್ಲಿ ಹೆಣಗಳನ್ನು ಹೂತಿಟ್ಟಿದ್ದ ಎಂಬುವುದು ಬೋಗಸ್ ಆಯ್ತು. ಹಿಂದೂ ಪುಣ್ಯಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಹುನ್ನಾರ ನಡೆದಿದೆ. ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್ಗೆ ರೈಟ್ ಹ್ಯಾಂಡ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ದೊಡ್ಡ ಷಡ್ಯಂತ್ರ ಇದೆ ಅಂತಾ ಹೇಳಿದ್ದಾರೆ. ಆ ಷಡ್ಯಂತ್ರವನ್ನ ಬಹಿರಂಗವಾಗಿ ನಾನು ತಿಳಿಸಿದ್ದೇನೆ. ಹುನ್ನಾರಕ್ಕೆ ಪ್ಲ್ಯಾನ್ ಮಾಡಿದ್ದವರನ್ನು ತಕ್ಷಣ ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದರು.
ಯೂಟ್ಯೂಬರ್ ಅಪಪ್ರಚಾರ ಮಾಡಿದರು. ಅವರಿಗೆ ಎಲ್ಲಿಂದ ಮಾಹಿತಿ ಬಂತು?ಮುಸುಕುಧಾರಿ ಎಲ್ಲಿಂದ ಬಂದ? ಬುರುಡೆಗಳೆಲ್ಲ ಸುಳ್ಳು. ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದ್ದೇ ಇದೆ. ಇದು ಚಾಲೆಂಜ್, ಯಾವುದೇ ಅನುಮಾನ ಬೇಡ. ಸಿಬಿಐ, ಎನ್ಐಎ ತನಿಖೆ ಆದ್ರೆ ಮಾತ್ರ ಸತ್ಯ ಹೊರ ಬರುತ್ತದೆ. ಎಸ್ಐಟಿ ಆದ್ರೆ ಮತ್ತೆ ದಾರಿ ತಪ್ಪುತ್ತದೆ. ಸಿಬಿಐ ಮೇಲೆ ನಂಬಿಕೆ ಇಲ್ಲ ಅಂದ್ರೆ ಎನ್ಐಎಗೆ ಕೊಡಿ. ಸರ್ಕಾರ ಸೂಕ್ತ ತನಿಖೆಗೆ ಮುಂದಾಗದಿದ್ದರೇ ನಾನು ಹೈಕೋರ್ಟ್, ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ. ಕೋರ್ಟ್ ಮೂಲಕವೇ ತನಿಖೆಗೆ ನಾನು ಮುಂದಾಗುತ್ತೇನೆ. ಪುಣ್ಯಕ್ಷೇತ್ರಕ್ಕೆ ಬಂದಿರುವ ಕಳಂಕ ಹೋಗಬೇಕು ಎಂದರು.

ನೋಡಿರಿ

