ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ – ಮತ್ತಿಬ್ಬರು ದರ್ಶನ್ ಫ್ಯಾನ್ಸ್ ಅರೆಸ್ಟ್!

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಹಾಕಿವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಶನಿವಾರ ಮೂವರನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ರು. ಇದೀಗ ಮತ್ತಿಬ್ಬರನ್ನ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಭಯೋತ್ಪಾದಕನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನೆ ಭಾಗಿ- ಉ*ಗ್ರವಾದಕ್ಕೆ ಶತ್ರು ದೇಶ ಕೈ ಜೋಡಿಸಿರೋದು ಬಹಿರಂಗ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅರೆಸ್ಟ್ ಆಗ್ತಿದ್ದಂತೆ, ನಟಿ ರಮ್ಯಾ ರೇಣುಕಾಸ್ವಾಮಿ ಕುಟುಂಬದ ಪರ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ರು. ಕಳೆದ ಕೆಲವು ದಿನಗಳ ಹಿಂದೆ ಕೂಡ ರಮ್ಯಾ ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ತೀರ್ಪಿಗೆ ಸಂಬಂಧಿಸಿ ರಮ್ಯಾ ಪೋಸ್ಟ್ ಮಾಡಿದ್ದರು. ನ್ಯಾಯ ಸಿಗುವ ಭರವಸೆ ಮೂಡುತ್ತಿದೆ ಎಂದು ಬರೆದಿದ್ದರು. ಇದು ದರ್ಶನ್ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾಗಿತ್ತು. ದರ್ಶನ್ ಅವರ ಕೆಲ ಅಭಿಮಾನಿಗಳು ರಮ್ಯಾ ವಿರುದ್ಧ ಅಶ್ಲೀಲ ಮೆಸೇಜ್ಗಳನ್ನು ಕಳುಹಿಸಿದರು. ಈ ಬಗ್ಗೆ ನಟಿ ದೂರು ದಾಖಲಿಸಿದ್ರು. ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಮತ್ತಿಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಈಗಾಗಲೇ 43 ಇನ್ಸ್ಟಾಗ್ರಾಂ ಅಕೌಂಟ್ ಬೆನ್ನತ್ತಿರುವ ಸಿಸಿಬಿ ಪೊಲೀಸರು, ನಟಿ ರಮ್ಯಾ ಬಳಿ ಅಶ್ಲೀಲ ಮೆಸೇಜ್ ಅಕೌಂಟ್ಗಳ ಕುರಿತು ಮಾಹಿತಿ ಪಡೆದಿದ್ದಾರೆ. ಯಾವ ಪೇಜ್ಗಳಿಂದ ಅಶ್ಲೀಲ ಮೆಸೇಜ್ಗಳು ಬಂದಿದ್ದವು? ಯಾವ ನಂಬರ್ಗಳಿಂದ ಬೆದರಿಕೆ ಕರೆ ಬಂದಿತ್ತು ಇತ್ಯಾದಿ ಎಲ್ಲದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಎಫ್ಐಆರ್ನ ಆಧಾರದ ಮೇಲೆ ತನಿಖೆ ಮುಂದುವರೆದಿದೆ. ಸೈಬರ್ ಕ್ರೈಂ ಪೊಲೀಸರು ಉಳಿದ ಆರೋಪಿಗಳನ್ನು ಕೂಡ ಶೀಘ್ರದಲ್ಲಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ನೋಡಿರಿ

