ಮತ್ತೆ ಕೋರ್ಟ್ ಮೆಟ್ಟಿಲೇರಿದ ದಾಸ – ವಿದೇಶಕ್ಕೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ

ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿದೇಶಕ್ಕೆ ಹಾರಲು ನಟ ಸಿದ್ಧತೆ ಮಾಡಿಕೊಂಡಿದ್ದು, ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: LSG ಬೆಂಡೆತ್ತಿ RCB ಚರಿತ್ರೆ.. ಜಿತೇಶ್ ಜೋಶ್ಗೆ ಮಂಕಾದ ಪಂತ್ – ಕೀಳು ಮಟ್ಟಕ್ಕಿಳಿದು ಕೆಟ್ಟ ದಿಗ್ವೇಶ್
ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಡೆವಿಲ್ ಚಿತ್ರೀಕರಣ ನಡೆಯುತ್ತಿದೆ. ಇದೀಗ ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.
ವಿದೇಶಕ್ಕೆ ತೆರಳಿದರೆ ಭಾರತಕ್ಕೆ ಮತ್ತೆ ವಾಪಸ್ ಬರುವುದು ಅನುಮಾನ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿರುವುದ್ದರಿಂದ ವಿದೇಶಕ್ಕೆ ತೆರಳಲು ಅನಮತಿ ನೀಡದಂತೆ ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಆಕ್ಷೇಪಣೆ ಸಲ್ಲಿಸಿದ್ದಾರೆ. ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಕೋರ್ಟ್‌ನಲ್ಲಿ ನಡೆಯುತ್ತಿದೆ.