ಜೈಲಿನಲ್ಲಿ ದಾಸನಿಗೆ ನರಕ ದರ್ಶನ – ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ ಚಾಲೆಂಜಿಂಗ್ ಸ್ಟಾರ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೀಗ ಜೈಲಿನಲ್ಲಿರುವ ದರ್ಶನ್ ಗೆ ನರಕ ದರ್ಶನವಾಗಿದೆ. ಮೂಲಭೂತ ಸೌಕರ್ಯ ನೀಡುವಂತೆ ದರ್ಶನ್ ಕೋರ್ಟ್ ಮೊರೆ ಹೋಗಿದ್ರು. ಕೋರ್ಟ್ ಆದೇಶ ನೀಡಿದ್ರೂ ಜೈಲಾಧಿಕಾರಿಗಳು ಅಗತ್ಯವಿರುವ ಸೌಲಭ್ಯ ನೀಡಿಲ್ಲ. ಆದೇಶ ಉಲ್ಲಂಘಿಸಿದ್ದಾರೆ ಎಂದು ದರ್ಶನ್ ದೂರಿದ್ದಾರೆ. ಈ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗಲೇ ನಟ ದರ್ಶನ್, ತಮ್ಮ ಹಕ್ಕುಗಳಿಗಾಗಿ ಇದೀಗ ಮಾನವ ಹಕ್ಕು ಆಯೋಗದ ಮೊರೆ ಹೋಗಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಕಾಂತಾರಾ ಚಾಪ್ಟರ್ 1 ಪ್ರೀಮಿಯರ್ ಶೋ ಆರಂಭ – ಎಲ್ಲೆಲ್ಲಿ ಪ್ರೀಮಿಯರ್ ಶೋ ಇರಲಿದೆ?
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈ ಹಿಂದೆ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಸಿಗರೇಟು ಸೇರಿದಂತೆ ಕೆಲವು ಸೌಲಭ್ಯಗಳನ್ನು ಅಕ್ರಮವಾಗಿ ಪಡೆದಿದ್ದರು. ಇದೇ ಕಾರಣಕ್ಕೆ ಈಗ ಜೈಲಧಿಕಾರಿಗಳು ಹೆಚ್ಚಿನ ಶಿಸ್ತಿನಿಂದ ದರ್ಶನ್ ಅವರನ್ನು ಇರಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ತಮ್ಮನ್ನು ಬಿಸಿಲು ಚೆನ್ನಾಗಿ ಬರುವ ಬ್ಯಾರಕ್ಗೆ ವರ್ಗಾಯಿಸುವಂತೆ ದರ್ಶನ್ ಮನವಿ ಮಾಡಿದ್ದಾರೆ. ಮಾತ್ರವಲ್ಲದೆ ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್ಶೀಟ್ಗಳು ಬೇಕೆಂದು ಮನವಿ ಮಾಡಿದ್ದಾರೆ. ಆದರೆ ಇದ್ಯಾವುದಕ್ಕೂ ಜೈಲು ಅಧೀಕ್ಷಕರು ಅನುಮತಿ ನೀಡಿಲ್ಲ. ಹೀಗಾಗಿ ದರ್ಶನ್ ಪರ ವಕೀಲು ನ್ಯಾಯಾಲಯದ ಮೊರೆ ಹೋಗಿದ್ದರು. ಇತ್ತೀಚೆಗಷ್ಟೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ-ಪ್ರತಿವಾದಗಳು ನಡೆದಿವೆ. ನ್ಯಾಯಾಲಯವು ಅಕ್ಟೋಬರ್ 09ಕ್ಕೆ ಆದೇಶವನ್ನು ಕಾಯ್ದಿರಿಸಿದೆ. ಆದ್ರೀಗ ನಟ ದರ್ಶನ್, ಇದೀಗ ಮಾನವ ಹಕ್ಕು ಆಯೋಗದ ಮೊರೆ ಹೋಗಲು ನಿರ್ಧಾರ ಮಾಡಿದ್ದಾರೆ. ಮಾನವ ಆಯೋಗಕ್ಕೆ ಪತ್ರ ಬರೆದು ತಮಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ದೂರು ನೀಡಲಿದ್ದಾರೆ. ನ್ಯಾಯಾಲಯದಲ್ಲಿ ವಾದ-ಪ್ರತಿವಾದದ ವೇಳೆಯೂ ಸಹ ದರ್ಶನ್ ಪರ ವಕೀಲರು, ಜೈಲಧಿಕಾರಿಗಳು ಅಮಾನವೀಯವಾಗಿ ದರ್ಶನ್ ಜೊತೆಗೆ ನಡೆದುಕೊಳ್ಳುತ್ತಿದ್ದಾರೆ ಎಂದು ವಾದಿಸಿದ್ದರು. ಇದೇ ಕಾರಣಕ್ಕೆ ಈಗ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಲು ದರ್ಶನ್ ಮುಂದಾಗಲಿದ್ದಾರೆ.
ಮಾನವ ಹಕ್ಕು ಆಯೋಗವು, ಯಾವುದೇ ವ್ಯಕ್ತಿಯ ಸಾಂವಿಧಾನಿಕ ಹಕ್ಕುಗಳಿಗಾಗಿ ಕೆಲಸ ಮಾಡುವ ಸಂಸ್ಥೆಯಾಗಿದ್ದು, ಇದೀಗ ದರ್ಶನ್, ನ್ಯಾಯಾಂಗ ಖೈದಿಗೆ ಇರುವ ಹಕ್ಕುಗಳನ್ನು ಉಳಿಸಿಕೊಡುವಂತೆ ಮಾನವ ಹಕ್ಕು ಆಯೋಗದ ಮೊರೆ ಹೋಗಲಿದ್ದಾರೆ. ಈ ಬಗ್ಗೆ ದರ್ಶನ್ ಅವರು ತಮ್ಮ ವಕೀಲ ಸುನಿಲ್ ಅವರೊಟ್ಟಿಗೆ ಚರ್ಚೆ ಮಾಡಿದ್ದಾರೆ.

ನೋಡಿರಿ

