ಒಂಬತ್ತು ತಿಂಗಳ ನಂತರ ಫ್ಯಾನ್ಸ್‌ಗೆ ದರ್ಶನ ಭಾಗ್ಯ! – ಸಾರ್ವಜನಿಕ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್

ಒಂಬತ್ತು ತಿಂಗಳ ನಂತರ ಫ್ಯಾನ್ಸ್‌ಗೆ ದರ್ಶನ ಭಾಗ್ಯ! – ಸಾರ್ವಜನಿಕ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಜೈಲು ಪಾಲಾಗಿದ್ದ ದರ್ಶನ್‌ ಬೇಲ್‌ ಮೂಲಕ ಹೊರ ಬಂದಿದ್ದಾರೆ.. ಜೈಲಿನಿಂದ ಬಂದ ಬಳಿಕ ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ. ಅದ್ರ ಜೊತೆಗೆ ಶೂಟಿಂಗ್‌ ನಲ್ಲೂ ಭಾಗಿಯಾಗಿದ್ದಾರೆ.. ಇದೀಗ ಜೈಲಿನಿಂದ ಬಂದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಕ್ರಿಕೆಟ್‌ ಪ್ರೇಮಿಗಳಿಗೆ ಗುಡ್ ನ್ಯೂಸ್! – ಇನ್ನುಮುಂದೆ ಪಿವಿಆರ್ ನಲ್ಲೂ ಕ್ರಿಕೆಟ್‌ ಪ್ರದರ್ಶನ?

ಹೌದು, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಬಳಿಕ ದರ್ಶನ್ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿಲ್ಲ. ಆಗೊಮ್ಮೆ ಈಗೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಂಚಿಕೊಳ್ಳುವುದರ ಹೊರತಾಗಿ ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ ಕಾಣಿಸಿಕೊಂಡಿಲ್ಲ. ಇದೀಗ ತಮ್ಮ ಆಪ್ತನಿಗಾಗಿ ಮತ್ತೆ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ನಟ ದರ್ಶನ್.

ದರ್ಶನ್ ಆಪ್ತ ಧನ್ವೀರ್ ನಟಿಸಿರುವ ‘ವಾಮನ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗವಹಿಸಲಿದ್ದಾರೆ. ಮಾರ್ಚ್ 27 ರಂದು ಪ್ರಸನ್ನ ಚಿತ್ರಮಂದಿರದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ನಟ ದರ್ಶನ್ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗಿ ಆಗಲಿದ್ದಾರೆ. ಭಾರಿ ಸಂಖ್ಯೆಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಕಾಟೇರ  ಸಿನಿಮಾದ ಸಕ್ಸಸ್ ಮೀಟ್​ನ ಬಳಿಕ ಇದೇ ಮೊದಲ ಬಾರಿಗೆ ನಟ ದರ್ಶನ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ‘ಕಾಟೇರ’ ಸಕ್ಸಸ್ ಮೀಟ್​ನಲ್ಲಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ಮಾತನಾಡಿದ್ದರು. ಅದಾದ ಬಳಿಕ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದರು ನಟ ದರ್ಶನ್. ಜೈಲಿನಿಂದ ಹೊರಬಂದ ಬಳಿಕ ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶನ ಮಾಡಿರುವ ‘ರಾಯಲ್’ ಸಿನಿಮಾ ವೀಕ್ಷಿಸಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ಅಂದು ದರ್ಶನ್ ಏನು ಮಾತನಾಡಲಿದ್ದಾರೆ ಎಂಬುದು ಸಹ ಕುತೂಹಲ ಕೆರಳಿಸಿದೆ.

Shwetha M

Leave a Reply

Your email address will not be published. Required fields are marked *