ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ – ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ಭೇಟಿ!

ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ – ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ಭೇಟಿ!

ಇವತ್ತು ಆಷಾಢ ಮಾಸದ ಎರಡನೇ ಶುಕ್ರವಾರ.. ಮೈಸೂರು ಚಾಮುಂಡೇಶ್ವರಿ ತಾಯಿ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿ, ತಾಯಿ ಚಾಮುಂಡಿಯ ದರ್ಶನ ಪಡೆಯುತ್ತಿದ್ದಾರೆ. ಇದೀಗ ಸ್ಯಾಂಡಲ್‌ ವುಡ್‌ ನಟ ದರ್ಶನ್‌ ಕೂಡ ದೇವಿ ದರ್ಶನ ಪಡೆಯುತ್ತಿದ್ದಾರೆ.

ಇದನ್ನೂ ಓದಿ: 5 ದಿನದ ಕಾಲ್‌ಶೀಟ್..‌ ಕಣ್ಣಪ್ಪ ಸಿನಿಮಾದಲ್ಲಿ ಶಿವನ ಪಾತ್ರಕ್ಕೆ ಅಕ್ಷಯ್‌ ಕುಮಾರ್‌ 10 ಕೋಟಿ ಸಂಭಾವನೆ?

ಆಷಾಢ ಶುಕ್ರವಾರ ಹಿನ್ನೆಲೆ ದೇವಸ್ಥಾನವನ್ನು ತೋತಾಪುರಿ ಮೆಕ್ಕೆಜೋಳ ಹಾಗೂ ಕಮಲದಿಂದ ಅಲಂಕಾರ ಮಾಡಲಾಗಿದೆ. ಇವತ್ತು ಸ್ಯಾಂಡಲ್‌ವುಡ್‌ ನಟ ದರ್ಶನ್‌ ಕೂಡ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿ ದೇವಿಯ ದರ್ಶನ ಪಡೆದಿದರು. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್‌ ನೀಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಜಾಮೀನಿನ ಮೇಲಿರುವ ದರ್ಶನ್‌ಗೆ, ಇತ್ತೀಚೆಗೆ ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಹೆಚ್ ಕೋರ್ಟ್ ಅನುಮತಿ ನೀಡಿತ್ತು. ಜೂನ್ 1ರಿಂದ 25ರವರೆಗೆ ಡೆವಿಲ್ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡಲಾಗಿತ್ತು.

Shwetha M