ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ – ಕರ್ನಾಟಕದಲ್ಲಿ ಏಪ್ರಿಲ್ 26ರಂದು, ಮೇ 7ರಂದು ಚುನಾವಣೆ
ಜೂನ್ 4ರಂದು ಫಲಿತಾಂಶ ಪ್ರಕಟ

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ – ಕರ್ನಾಟಕದಲ್ಲಿ ಏಪ್ರಿಲ್ 26ರಂದು, ಮೇ 7ರಂದು ಚುನಾವಣೆಜೂನ್ 4ರಂದು ಫಲಿತಾಂಶ ಪ್ರಕಟ

Loka spl Script

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್  ಆಗಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 15 ಕ್ಷೇತ್ರ, ಏಪ್ರಿಲ್ 26ರಂದು, ಎರಡನೇ ಹಂತದಲ್ಲಿ 13 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ದೇಶದಲ್ಲಿ ಒಟ್ಟು ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆ, ಏಪ್ರಿಲ್ 26ರಂದು ಎರಡನೇ ಹಂತದ ಚುನಾವಣೆ, ಮೇ 7ರಂದು ಮೂರನೇ ಹಂತದ ಚುನಾವಣೆ, ಮೇ 13ರಂದು ನಾಲ್ಕನೇ ಹಂತದ ಚುನಾವಣೆ, ಮೇ 20ರಂದು ಐದನೇ ಹಂತದ ಚುನಾವಣೆ, ಮೇ 25ರಂದು ಆರನೇ ಹಂತದ ಚುನಾವಣೆ, ಜೂನ್ 1ರಂದು ಏಳನೇ ಹಂತದ ಚುನಾವಣೆ, ಜೂನ್ 4ರಂದು ಫಲಿತಾಂಶ. ಅಲ್ಲದೇ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಉಪಚುನಾವಣೆ, ಮೂರನೇ ಹಂತದ ಮತದಾನದ ವೇಳೆ ಸುರಪುರದಲ್ಲಿ ಚುನಾವಣೆ, ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಕ್ಷೇತ್ರ ಸುರಪುರ.

ಇದನ್ನೂ ಓದಿ: ಅಳಿಯನ ಜಾತಕ ಹಿಡಿದು ಅಮಿತ್ ಶಾಗೆ ಗೌಡರು ಹೇಳಿದ್ದೇನು? – ಡಾ.ಮಂಜುನಾಥ್ ಭವಿಷ್ಯವೇನು?

ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.

ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಇನ್ನು ಚುನಾವಣಾ ಅಕ್ರಮದ ಬಗ್ಗೆ ಚುನಾವಣಾ ಆಯೋಗ ಹದ್ದಿನ ಕಣ್ಣು ಇಡಲಿದೆ. ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ಮಾಹಿತಿ ನೀಡಬೇಕು. ಎಲ್ಲ ಬ್ಯಾಂಕ್​ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿರ್ದೇಶ ನೀಡಿದರು. ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳ ಮೇಲೂ ನಿಗಾ ಇಡಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ ಎಂದರು. ರೈಲ್ವೆ ಸ್ಟೇಷನ್, ಏರ್​ಪೋರ್ಟ್​ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಿ, ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಎಂದರು.ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಎಲ್ಲಾ ಕಡೆ ಚೆಕ್​ಪೋಸ್ಟ್ ಇರಲಿವೆ, ಡ್ರೋನ್​ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ಸಿಆರ್​ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು. ರೌಡಿಶೀಟರ್​ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದರು. ಆ್ಯಪ್ ಮೂಲಕ ತಮ್ಮ ಅಭ್ಯರ್ಥಿಗಳ ಮಾಹಿತಿ ಲಭ್ಯ ಇರಲಿದೆ. ಅಭ್ಯರ್ಥಿಗಳ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಆ್ಯಪ್​ನಲ್ಲಿರಲಿದೆ. ಚುನಾವಣಾ ಅಕ್ರಮಗಳನ್ನು ಮತದಾರ ಬಯಲು ಮಾಡಬಹುದು. ಆ್ಯಪ್ ಮೂಲಕ ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು. ಕೂಡಲೇ ಅಕ್ರಮ ಎಸಗುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು. ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್​ಡೆಸ್ಕ್​, ವಿದ್ಯುತ್​ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್​ಚೇರ್ ವ್ಯವಸ್ಥೆ ಇರಲಿದ್ದು​, ಸ್ವಯಂಸೇವಕರೂ ಇರಲಿದ್ದಾರೆ. 2 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ವಿಭಜಿಸಲು ಪ್ರೇರೇಪಿಸುವ ರಾಜಕೀಯ ಭಾಷಣ ಮಾಡುವಂತಿಲ್ಲ ಎಂದು ರಾಜಕೀಯ ಪಕ್ಷಗಳಿಗೆ ಸಲಹೆ ನೀಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ವಿಷಯ ಆಧಾರಿತ ಪ್ರಚಾರ ಮಾಡಬೇಕು. ದ್ವೇಷದ ಭಾಷಣಗಳಿಗೆ ಅವಕಾಶವಿಲ್ಲ. ಯಾವುದೇ ಜಾತಿ ಅಥವಾ ಧಾರ್ಮಿಕ ವಿಷಯದ ಮೂಲಕ ಮತಯಾಚನೆ ಮಾಡುವಂತಿಲ್ಲ. ಖಾಸಗಿ ಜೀವನದ ಯಾವುದೇ ಅಂಶವನ್ನು ಟೀಕಿಸುವುದಿಲ್ಲ. ಪರಿಶೀಲಿಸದ ಮತ್ತು ತಪ್ಪುದಾರಿಗೆಳೆಯುವ ಜಾಹೀರಾತು ಪ್ರಕಟಿಸಬಾರದು. ಜಾಹೀರಾತುಗಳನ್ನು ಸುದ್ದಿಯಾಗಿ ನೀಡುವಂತಿಲ್ಲ. ಪ್ರತಿಸ್ಪರ್ಧಿಗಳನ್ನು ನಿಂದಿಸುವ/ಅವಮಾನಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೇಲೆ ನಿರ್ಬಂಧ ಹೇರಲಾಗುವುದು. ಸ್ಟಾರ್ ಪ್ರಚಾರಕರು ಪ್ರಚಾರದ ಗೌರವ ಕಾಪಾಡಿಕೊಳ್ಳಬೇಕು ಎಂದರು.

 

Sulekha