ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಆಗಸ್ಟ್ ತಿಂಗಳಿನಲ್ಲಿ ಯಜಮಾನಿ ಖಾತೆಗೆ ಹಣ ಜಮೆ
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಬಹುಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದೆ. ಸರ್ಕಾರ ರಚನೆಯಾಗಿ 2 ತಿಂಗಳ ಬಳಿಕ ಡೇಟ್ ಫಿಕ್ಸ್ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19ರಿಂದ ಆರಂಭವಾಗಲಿದೆ.
ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಸದ್ದುಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು. ಫಲಾನುಭವಿಯ ಮಹಿಳೆ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರ ಆಗಿರಬಾರದು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಕಡ್ಡಾಯವಾಗಿ ಆಗಿರಬೇಕು. ಪ್ರಜಾಪ್ರತಿನಿಧಿಗಳು ಮನೆಗೆ ಭೇಟಿ ನೀಡಿದಾಗ ಅವರಿಂದಲೂ ನೋಂದಣಿ ಮಾಡಿಸಿಕೊಳ್ಳಬಹುದೆಂದು ಹೇಳಿದರು.
ಗೃಹಲಕ್ಷ್ಮೀ ಯೋಜನೆಯನ್ನು ರಾಷ್ಟ್ರೀಯ ನಾಯಕರಿಂದ ಚಾಲನೆ ನೀಡಲಾಗುವುದು. ರಾಷ್ಟ್ರೀಯ ನಾಯಕರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ನಾಯಕರು ಒಪ್ಪಿಕೊಂಡರೆ 17ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಉದ್ಘಾಟನೆ ಮಾಡಲಾಗುವುದು. ಸೋನಿಯಾ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ. ರಾಷ್ಟ್ರೀಯ ನಾಯಕರ ನಿರ್ಧಾರ ಇಂದು ಮಧ್ಯಾಹ್ನ ಖಚಿತವಾಗುತ್ತದೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸಮಯ ನೀಡಲಿಲ್ಲ ಅಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜುಲೈ 19ರಂದು ಚಾಲನೆ ನೀಡಲಾಗುವುದು ಎಂದರು.