ದಾವಣಗೆರೆಯ ದಶದಿಕ್ಕುಗಳೂ ಕೇಸರಿಮಯ – ಮೋದಿ ಸ್ವಾಗತಕ್ಕೆ ಸಜ್ಜಾಯ್ತು ಬೆಣ್ಣೆನಗರಿ!
ವಿಧಾನಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗುತ್ತಿದೆ. ರಾಜಕೀಯ ಅಖಾಡ ಕ್ಷಣಕ್ಷಣಕ್ಕೂ ರಂಗೇರುತ್ತಿದ್ದು ಯಾವುದೇ ಕ್ಷಣದಲ್ಲಾದ್ರೂ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಭರ್ಜರಿ ತಯಾರಿ ನಡೆಸಿವೆ. ಇದೀಗ ಪ್ರಧಾನಿ ನರೇಂದ್ರ ಮೋದಿ ನಾಳೆ ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದು ದಾವಣಗೆರೆಯಲ್ಲಿ ಅದ್ಧೂರಿ ಸಿದ್ಧತೆ ನಡೆಯುತ್ತಿದೆ.
ಇದನ್ನೂ ಓದಿ : ಚುನಾವಣಾ ದಿನಾಂಕ ಘೋಷಣೆಗೆ ಮುಹೂರ್ತ ಫಿಕ್ಸ್ ಆಯ್ತಾ – ಚುನಾವಣಾಧಿಕಾರಿಗಳು ಬರೆದ ಪತ್ರದಲ್ಲೇನಿದೆ?
ಮಾರ್ಚ್ 25 ರಂದು ಮಧ್ಯಾಹ್ನ 3 ಗಂಟೆಗೆ ಮೋದಿಯವರು(PM Narendra Modi) ದಾವಣಗೆರೆ ಜಿಎಂ ಐಟಿ ಕ್ಯಾಂಪಸ್ಗೆ(Davanagere IIT Campus) ಆಗಮಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಆರಂಭಿಸಿದ ವಿಜಯ ಸಂಕಲ್ಪ ಯಾತ್ರೆ ರಾಜ್ಯದ ನಾಲ್ಕು ಭಾಗಗಳಲ್ಲಿ ನಡೆದಿದ್ದು, ದಾವಣಗೆರೆಯಲ್ಲಿ ಸಮಾರೋಪ ಕಾರ್ಯಕ್ರಮ ನಡೆಯುತ್ತಿದೆ. ಅಂದಾಜು 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಮೋದಿ ಆಗಮನದ ಹಿನ್ನೆಲೆ ಇಡೀ ದಾವಣಗೆರೆಯನ್ನು ಕಾರ್ಯಕರ್ತರು ಕೇಸರಿಮಯ ಮಾಡಿದ್ದಾರೆ. ಒಟ್ಟು 8 ಜಿಲ್ಲೆ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ 10 ಲಕ್ಷ ಕಾರ್ಯಕರ್ತರು ಬರುವ ನಿರೀಕ್ಷೆ ಇದೆ.
ಮಿಷನ್ 150 ಗುರಿಯೊಂದಿಗೆ ರಾಜ್ಯದ 4 ದಿಕ್ಕುಗಳಿಂದ ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿತ್ತು. ಮಾ.1ರಂದು ಮಲೆ ಮಾದೇಶ್ವರ ಬೆಟ್ಟ, ಮಾ.2ರಂದು ಸಂಗೊಳ್ಳಿ ರಾಯಣ್ಣನ ಸ್ಮಾರಕದ ನಂದಗಢದಿಂದ, ಮಾ.3ಕ್ಕೆ ಬಸವ ಕಲ್ಯಾಣದಿಂದ, ಅದೇ ದಿನ ಕೆಂಪೇಗೌಡರ ಜನ್ಮಸ್ಥಳ ಅವತಿ ದೇವನಹಳ್ಳಿಯಿಂದ ರಥಯಾತ್ರೆ ಆರಂಭವಾಗಿದ್ದು, ಸುಮಾರು 5,600 ಕಿಲೋ ಮೀಟರ್ ಕ್ರಮಿಸಿ ರಥಯಾತ್ರೆಗಳು ದಾವಣಗೆರೆಯಲ್ಲಿ ಮಹಾ ಸಂಗಮವಾಗಲಿವೆ.