ಬೆಣ್ಣೆನಗರಿಯಲ್ಲಿ 9ನೇ ತರಗತಿ ವಿದ್ಯಾರ್ಥಿ ಹೃದಯಘಾತಕ್ಕೆ ಬಲಿ!

ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಗೋಗುದ್ದು ಗ್ರಾಮದಲ್ಲಿ 14 ವರ್ಷದ ವಿದ್ಯಾರ್ಥಿ ಮುಝುಮ್ಮಿಲ್ ಎಂಬಾತ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ. 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕ ಮನೆಯಲ್ಲೇ ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಚಮನ್ ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರನಾದ ಮುಝುಮ್ಮಿಲ್ ರಾಜೀವ್ ಗಾಂಧಿ ವಸತಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ ಇದ್ದಕ್ಕಿದ್ದ ಹಾಗೇ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ಉಸಿರಾಡುವ ಗಾಳಿಯೇ ವಿಷವಾಗುತ್ತಿದೆ! – ಬೆಂಗಳೂರು, ಉಡುಪಿಯಲ್ಲಿ ಏರ್ ಕ್ವಾಲಿಟಿ ಕಳಪೆ!
ಮುಝುಮ್ಮಿಲ್ ನಿನ್ನೆ ಬೆಳಗಿನ ಜಾವ ಮನೆಯಲ್ಲೇ ಏಕಾಏಕಿ ಕುಸಿದು ಬಿದ್ದಿದ್ದಾನೆ. ಕುಟುಂಬಸ್ಥರು ಆತಂಕಗೊಂಡು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಹೃದಯಘಾತವೇ ಸಾವಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲ ಮುಟ್ಟಿದೆ. ಮುಝುಮ್ಮಿಲ್ ಶಾಲೆಯಲ್ಲಿ ಚೆನ್ನಾಗಿ ಓದುತ್ತಿದ್ದ ವಿದ್ಯಾರ್ಥಿ. ಶಿಕ್ಷಕರು ಮತ್ತು ಸಹಪಾಠಿಗಳು ಅವನನ್ನು ಒಳ್ಳೆಯ ವಿದ್ಯಾರ್ಥಿ ಎಂದು ವರ್ಣಿಸಿದ್ದಾರೆ. ಕುಟುಂಬದಲ್ಲಿ ಒಬ್ಬನೇ ಮಗನಾಗಿದ್ದ ಅವನ ಸಾವು ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ.
ಹೃದಯಘಾತದಿಂದ ಯುವ ವಯಸ್ಸಿನಲ್ಲಿ ಸಾವು ಸಂಭವಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ವೈದ್ಯರು ಹೇಳುವಂತೆ, ಬಾಲ್ಯದಿಂದಲೇ ಆರೋಗ್ಯದ ಬಗ್ಗೆ ಗಮನ ನೀಡಬೇಕು. ಸರಿಯಾದ ಆಹಾರ ಸೇವಿಸುವುದು, ಹೆಚ್ಚು ಆಟಗಳಲ್ಲಿ ತೊಡಗಿಕೊಳ್ಳುವುದು, ಒತ್ತಡ ಕಡಿಮೆ ಮಾಡುವುದು, ಸಾಕಷ್ಟು ಹೊತ್ತು ನಿದ್ರೆ ಪಡೆಯುವುದು ಮುಖ್ಯ ಎಂದಿದ್ದಾರೆ.

ನೋಡಿರಿ

