ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್​ ಬಿಜೆಪಿ ಸೇರ್ಪಡೆ ಸಾಧ್ಯತೆ

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್​ ಬಿಜೆಪಿ ಸೇರ್ಪಡೆ ಸಾಧ್ಯತೆ

ಲೋಕಸಭೆ ಚುನಾವಣೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎದ್ದಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಮುಂದುವರಿದಿದೆ. ಸೋಮವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಮಹರಾಷ್ಟ್ರದ ಮಾಜಿ ಸಿಎಂ ಅಶೋಕ್​ ಚವಾಣ್ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಹೌದು, ಲೋಕಸಭೆ ಚುನಾವಣೆ ಬರುತ್ತಿದ್ದಂತೆ ಕಾಂಗ್ರೆಸ್‌ನ ಒಂದೊಂದೇ ಪ್ರಮುಖ ವಿಕೆಟ್‌ಗಳು ಪತನಗೊಳ್ಳುತ್ತಿದೆ. ಇದೀಗ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕನಾಗಿ ಗುರುತಿಸಿಕೊಂಡಿದ್ದ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾನ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅಶೋಕ್ ಚವಾನ್ ಅವರು ಮಂಗಳವಾರ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮಂಡ್ಯದಿಂದ ಈ ಬಾರಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲ್ಲ! –ಕಾರಣವೇನು ಗೊತ್ತಾ?

ತಿಂಗಳುಗಳ ಅಂತರದಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷದ ಪ್ರಮುಖ ಮೂರು ವಿಕೆಟ್ ಪತನಗೊಂಡಿದೆ. ಮಿಲಿಂದ್ ದಿಯೋರಾ, ಬಾಬಾ ಸಿದ್ದಿಕಿ ಬಳಿಕ ಇದೀಗ ಅಶೋಕ್ ಚವಾನ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಮೂವರು ಕಾಂಗ್ರೆಸ್ ಪಕ್ಷದ ಅತೀ ದೊಡ್ಡ ನಾಯಕರಾಗಿ ಗುರುತಿಸಿಕೊಂಡಿದ್ದವರು. ಈ ಪೈಕಿ ಅಶೋಕ್ ಚವಾನ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಲೇ ಕಾಂಗ್ರೆಸ್‌ನ ಪ್ರಮುಖ ಶಕ್ತಿಯಾಗಿ ಗುರುತಿಸಿಕೊಂಡಿದ್ದ ಅಶೋಕ್ ಚವಾನ್ ಇದೀಗ ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ.

ರಾಜೀನಾಮೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ್ದ ಅಶೋಕ್ ಚವಾನ್, ಬಿಜೆಪಿ ಸೇರಿಕೊಳ್ಳುವ ಕುರಿತು ಪ್ರಶ್ನೆಗೆ ಉತ್ತರಿಸಿದ್ದರು. ಮುಂದಿನ 48 ಗಂಟೆಗಳಲ್ಲಿ ರಾಜಕೀಯ ನಿರ್ಧಾರ ತಿಳಿಸುವುದಾಗಿ ಅಶೋಕ್ ಚವಾನ್ ಹೇಳಿದ್ದರು. ಮೂಲಗಳ ಪ್ರಕಾರ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಅಶೋಕ್ ಚವಾನ್‌ಗೆ ರಾಜ್ಯಸಭಾ ಸ್ಥಾನ ನೀಡುವ ಕುರಿತು ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.

Shwetha M