ಡಿಸಿ ಕ್ಯಾಪ್ಟನ್ ರಿಷಭ್ ಪಂತ್‌ಗೆ ನಿಷೇಧದ ಭೀತಿ- ಪದೇ ಪದೇ ಇದೇ ತಪ್ಪು ಮಾಡೋದ್ಯಾಕೆ ಪಂತ್?

ಡಿಸಿ ಕ್ಯಾಪ್ಟನ್ ರಿಷಭ್ ಪಂತ್‌ಗೆ ನಿಷೇಧದ ಭೀತಿ- ಪದೇ ಪದೇ ಇದೇ ತಪ್ಪು ಮಾಡೋದ್ಯಾಕೆ ಪಂತ್?

ಐಪಿಎಲ್ 16ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಪಟ್ಟಂತೆ ಡಿಸಿ ಕ್ಯಾಪ್ಟನ್ ರಿಷಭ್ ಪಂತ್ ಉಳಿದ ಪಂದ್ಯಗಳಿಂದ ನಿಷೇಧಕ್ಕೊಳಗಾಗುವ ಸಾಧ್ಯತೆಯಿದೆ. ಒಂದು ಬಾರಿ ವಾರ್ನಿಂಗ್ ಸಿಕ್ಕ ಮೇಲೆ ಮತ್ತೊಮ್ಮೆ ಕೂಡಾ ಪಂತ್ ಅದೇ ಮಿಸ್ಟೇಕ್ ಮಾಡಿದ್ದಾರೆ. ಹೀಗಾಗಿ ಐಪಿಎಲ್ ಪಂದ್ಯದಲ್ಲಿ ಅದೇ ತಪ್ಪನ್ನು ಮೂರು ಬಾರಿ ಮಾಡಿದರೆ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಡೆಲ್ಲಿ ವಿರುದ್ಧ ಗೆದ್ದು ಬೀಗಿದ ಕೆಕೆಆರ್​ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡಿತ್ತು.  ಆದರೆ ಬೌಲಿಂಗ್ ವೇಳೆ ಸ್ಲೋ ಓವರ್​ ರೇಟ್ ತಪ್ಪು ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ ಪಂದ್ಯವನ್ನು ಮುಗಿಸಿರಲಿಲ್ಲ. ಈ ಕಾರಣಕ್ಕಾಗಿ ನಾಯಕ ರಿಷಭ್ ಪಂತ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಡಿಸಿ ಟೀಮ್ ನ ಆಟಗಾರರು ಕೂಡಾ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ಪಾವತಿಸಬೇಕು. ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ.

ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದೀಗ ರಿಷಭ್ ಪಂತ್ 2 ಬಾರಿ ಈ ತಪ್ಪನ್ನು ಮಾಡಿದ್ದಾರೆ. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಶಿಕ್ಷೆಗೆ ಗುರಿಯಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ, ಇದೀಗ ಕೆಕೆಆರ್ ವಿರುದ್ಧ ಕೂಡ ಅದೇ ತಪ್ಪನ್ನು ಪುನರಾವರ್ತಿಸಿದ್ದಾರೆ. ಇನ್ನು ಮುಂಬರುವ ಪಂದ್ಯಗಳಲ್ಲಿ ಈ ತಪ್ಪನ್ನು ಮಾಡಿದರೆ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ಪಂದ್ಯಗಳಲ್ಲಿ ರಿಷಭ್ ಪಂತ್ ಸ್ಲೋ ಓವರ್​ ರೇಟ್​ ಬಗ್ಗೆ ಎಚ್ಚರಿಕೆವಹಿಸಿಕೊಳ್ಳುವುದು ಅನಿವಾರ್ಯ.

Sulekha