ಸಿಎಸ್‌ಕೆ ಎದುರು ಗೆಲುವಿನ ಸಂಭ್ರಮದಲ್ಲಿದ್ದ ಪಂತ್‌ಗೆ ದಂಡದ ಬರೆ – 12 ಲಕ್ಷ ಫೈನ್ ಕಟ್ಟಿದ ಡಿಸಿ ಕ್ಯಾಪ್ಟನ್ ರಿಷಭ್ ಪಂತ್

ಸಿಎಸ್‌ಕೆ ಎದುರು ಗೆಲುವಿನ ಸಂಭ್ರಮದಲ್ಲಿದ್ದ ಪಂತ್‌ಗೆ ದಂಡದ ಬರೆ – 12 ಲಕ್ಷ ಫೈನ್ ಕಟ್ಟಿದ ಡಿಸಿ ಕ್ಯಾಪ್ಟನ್ ರಿಷಭ್ ಪಂತ್

ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿರುವ ಸಂಭ್ರಮದಲ್ಲಿದೆ. ಆದ್ರೆ, ಗೆಲುವಿನ ಖುಷಿಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್​ಗೆ ದಂಡದ ಬರೆ ಬಿದ್ದಿದೆ. ಬೌಲಿಂಗ್ ವೇಳೆ ಸ್ಲೋ ಓವರ್​ ರೇಟ್ ಮಿಸ್ಟೇಕ್ ಮಾಡಿದ್ದ, ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ಸಮಯದೊಳಗೆ ಪಂದ್ಯವನ್ನು ಮುಗಿಸಿರಲಿಲ್ಲ. ಈ ಕಾರಣಕ್ಕಾಗಿ ನಾಯಕ ರಿಷಭ್ ಪಂತ್​ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಗಂಭೀರ್-ಕೊಹ್ಲಿ ದೋಸ್ತಿಯಾದ್ರಾ? – RCB ಕಂದ ಕೊಹ್ಲಿ ಎಂದಿದ್ಯಾರು?

ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ರನ್​ಗಳ ಜಯ ಸಾಧಿಸಿದೆ. ಆದ್ರೆ, ಡಿಸಿ ಕ್ಯಾಪ್ಟನ್ ರಿಷಭ್ ಪಂತ್‌ಗೆ ಗೆಲುವಿನ ಖುಷಿಗಿಂತ ದಂಡದ ಬರೆಯೇ ನೋವು ಕೊಟ್ಟಿದೆ. ಗುಜರಾತ್ ಟೈಟಾನ್ಸ್ ತಂಡದ ಶುಭಮನ್ ಗಿಲ್ ನಂತರ ನೀತಿ ಸಂಹಿತೆ ಉಲ್ಲಂಘನೆಗಾಗಿ ರಿಷಭ್ ಪಂತ್ ಕೂಡಾ ದಂಡ ಕಟ್ಟಿದ್ದಾರೆ.

ವಿಶಾಖಪಟ್ಟಣದ ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿತ್ತು. ಆದರೆ ಬೌಲಿಂಗ್ ವೇಳೆ ಸ್ಲೋ ಓವರ್​ ರೇಟ್ ತಪ್ಪು ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ ಪಂದ್ಯವನ್ನು ಮುಗಿಸಿರಲಿಲ್ಲ. ಈ ಕಾರಣಕ್ಕಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ. ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ. ಇದೀಗ ರಿಷಭ್ ಪಂತ್ ಮೊದಲ ಹಂತದ ತಪ್ಪನ್ನು ಮಾಡಿದ್ದು, ಹೀಗಾಗಿ 12 ಲಕ್ಷ ರೂ. ಮಾತ್ರ ದಂಡ ವಿಧಿಸಲಾಗಿದೆ. ಇನ್ನು ಇದೇ ತಪ್ಪನ್ನು ಮುಂದಿನ ಪಂದ್ಯಗಳಲ್ಲಿ 2 ಬಾರಿ ಪುನರಾವರ್ತಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಒಂದು ಪಂದ್ಯದ ನಿಷೇಧಕ್ಕೊಳಗಾಗಲಿದ್ದಾರೆ. ಹೀಗಾಗಿ ರಿಷಭ್ ಪಂತ್ ಮುಂದಿನ ಪಂದ್ಯಗಳಲ್ಲಿ ಸ್ಲೋ ಓವರ್​ ರೇಟ್​ ಬಗ್ಗೆ ಎಚ್ಚರಿಕೆವಹಿಸಿಕೊಳ್ಳಲಿದ್ದಾರೆ.

Sulekha