ದೆಹಲಿ ಕ್ಯಾಪಿಟಲ್ಸ್ Vs ಪಂಜಾಬ್ ಕಿಂಗ್ಸ್ ಕಾಳಗ – ಟಾಸ್ ಗೆದ್ದ ಅಕ್ಷರ್ ಪಡೆಯಿಂದ ಬ್ಯಾಟಿಂಗ್

ಐಪಿಎಲ್ 2026 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಇಲ್ಲಿಯವರೆಗೆ ಸೋಲು ಅನುಭವಿಸದ ಪಂಜಾಬ್ ಕಿಂಗ್ಸ್ಗೆ ಮೊದಲ ಸೋಲಿನ ಶಾಕ್ ನೀಡಲು ಅಕ್ಷರ್ ಪಟೇಲ್ ತಂಡ ಎದುರು ನೋಡುತ್ತಿದೆ. ಇತ್ತ ಕಳೆದ ಪಂದ್ಯದ ಸೋಲಿನಿಂದ ಕಂಗೆಟ್ಟಿರುವ ಡೆಲ್ಲಿಗೆ ಮತ್ತೊಂದು ಆಘಾತ ನೀಡಲು ಪಂಜಾಬ್ ಸಿದ್ಧವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
PBJS ಪ್ಲೇಯಿಂಗ್
ಶ್ರೇಯಸ್ ಅಯ್ಯರ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವೈಶಾಕ್ ವಿಜಯ್ಕುಮಾರ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.
DC ಪ್ಲೇಯಿಂಗ್
ಕೆಎಲ್ ರಾಹುಲ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಸಮೀರ್ ರಿಜ್ವಿ, ನಿತೀಶ್ ರಾಣಾ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಅಕ್ಸರ್ ಪಟೇಲ್ (ನಾಯಕ), ಲುಂಗಿ ಎನ್‌ಗಿಡಿ, ಕುಲ್ದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್.

ನೋಡಿರಿ

