ಬಜೆಟ್ ಅಧಿವೇಶನದ ನಡುವೆ ಔತಣಕೂಟ – ಡಿನ್ನರ್ ಮೀಟಿಂಗ್ ಕರೆದ ಡಿಸಿಎಂ ಡಿ ಕೆ ಶಿವಕುಮಾರ್

ಸರ್ಕಾರ ಬಜೆಟ್ ಅಧಿವಶೇನದ ಸಿದ್ಧತೆಯಲ್ಲಿದೆ. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ ಕುರ್ಚಿ ಪಾಲಿಟಿಕ್ಸ್ ನಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಬಜೆಟ್ ಅಧಿವೇಶನದ ನಡುವೆ ಮಾರ್ಚ್ 10ರಂದು ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ ಆಯೋಜನೆ ಮಾಡಿದ್ದಾರೆ.
ಇದನ್ನೂ ಓದಿ:ರಶ್ಮೀಕಾ ಜೊತೆ ಸೇರಿ ವಿಜಯ್ ದೇವರಕೊಂಡ ಗಿಫ್ಟ್ – 44 ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿದ್ಯಾರ್ಥಿ ವೇತನ ಘೋಷಣೆ
ರಾಜ್ಯ ಸರ್ಕಾರದಲ್ಲಿ ಬದಲಾವಣೆಯ ಕೂಗು ಕೇಳಿಬರುತ್ತಲೇ ಇದೆ. ಅದರಲ್ಲೂ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ಜೋರಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಕರೆದಿದ್ದಾರೆ ಎನ್ನಲಾಗಿದೆ. ಮಾರ್ಚ್ 10ರಂದು ಡಿಕೆಶಿ ಡಿನ್ನರ್ ಮೀಟಿಂಗ್ ಕರೆದಿದ್ದಾರೆ. ಕಾಂಗ್ರೆಸ್ನ ಶಾಸಕರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಔತಕೂಟ ಆಯೋಜನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣದ ಎಲ್ಲಾ ಶಾಸಕರನ್ನು ಕೂಡ ಈ ಔತಣ ಕೂಟಕ್ಕೆ ಕರೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಈ ಹಿಂದೆ ಬ್ರೇಕ್ಫಾಸ್ಟ್ ಮೀಟಿಂಗ್ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದ ಸಿಎಂ-ಡಿಸಿಎಂ ಈಗಲೂ ಅದೇ ತಂತ್ರದ ಮೊರೆ ಹೋಗಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ. ಡಿಕೆಶಿ ಆಯೋಜಿಸಿರುವ ಡಿನ್ನರ್ ಮೀಟಿಂಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನ ಕೂಡ ಕರೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ನಾಯಕತ್ವ ಬದಲಾವಣೆ ಬಗ್ಗೆ ಸಚಿವರು ಹಾಗೂ ಶಾಸಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಹೊತ್ತಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿನ್ನರ್ ಮೀಟಿಂಗ್ಗೆ ಕರೆದಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ನೋಡಿರಿ

