ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಗಡುವು ಮತ್ತೆ ವಿಸ್ತರಣೆ

ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಗಡುವು ಮತ್ತೆ ವಿಸ್ತರಣೆ

ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಗಡುವು ಮತ್ತೆ ವಿಸ್ತರಣೆಯಾಗಿದೆ. ಮಾರ್ಚ್ 31ಕ್ಕೆ ಗಡುವು ನೀಡಲಾಗಿತ್ತು. ಈಗ ಅವಧಿ ಮುಗಿಯುವ ಎರಡು ದಿನಗಳ ಮುಂಚೆಯೇ ಮತ್ತೆ ಗಡುವು ವಿಸ್ತರಣೆಯಾಗಿದೆ. ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಪರ್ಮನೆಂಟ್ ಅಕೌಂಟ್ ನಂಬರ್ ಅಂದರೆ PAN ಕಾರ್ಡ್ ಅತ್ಯಂತ ಪ್ರಮುಖ ಬ್ಯುಸಿನೆಸ್ ID ಆಗಿದ್ದು, ಪ್ಯಾನ್ ನಂಬರ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸವನ್ನು ಸುಲಭವಾಗಿ ನಿಭಾಯಿಸಲು ಸಾಧ್ಯವಿಲ್ಲ. ಬ್ಯಾಂಕಿನಲ್ಲಿ ಖಾತೆ ತೆರೆಯುವುದರಿಂದ ಹಿಡಿದು ಹೂಡಿಕೆ ಮಾಡುವವರೆಗೆ ಎಲ್ಲ ಕೆಲಸಗಳಿಗೂ ಪ್ಯಾನ್ ಕಾರ್ಡ್ ಬೇಕೇ ಬೇಕು. ಆ ಪರಿಸ್ಥಿತಿಯಲ್ಲಿ ಪ್ಯಾನ್ ಕಾರ್ಡ್ ಇಲ್ಲದಿದ್ದರೆ ನಿಮ್ಮ ಅನೇಕ ಹಣಕಾಸು ಕೆಲಸಗಳು ಸ್ಥಗಿತವಾಗಬಹುದು. ನೀವು ಇನ್ನೂ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದಿದ್ದರೆ, ಮುಂದೆ ದೊಡ್ಡ ಸಮಸ್ಯೆ ಎದುರಿಸಬೇಕಾಗಬಹುದು.

ಇದನ್ನೂ ಓದಿ:  ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿದ್ದೀರಾ – ಮಾರ್ಚ್ 31ರೊಳಗೆ ಮಾಡಿದ್ರೆ ನೀವು ಸೇಫ್..!

ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ಗಡುವು ಹತ್ತಿರ ಬಂದಿತ್ತು, ಈ ಹಿಂದೆ ಮಾರ್ಚ್ 31 ಕೊನೆಯ ದಿನಾಂಕವೆಂದು ಹೇಳಲಾಗಿತ್ತು. ಆದರೆ ಇದೀಗ ಜೂನ್ 30ರವರೆಗೂ ಗಡುವು ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರ ಹಾಗೂ ಆದಾಯ ತೆರಿಗೆ ಇಲಾಖೆ ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಲಿಂಕ್ ಮಾಡಿಸಿ ಅಂತಾ ಹೇಳ್ತಿರೋದಕ್ಕೆ ಬಲವಾದ ಕಾರಣಗಳು ಇವೆ. ಏನಂದ್ರೆ ಕೆಲವರು ತಮ್ಮ ಹೆಸರಲ್ಲಿ 2 ರಿಂದ 3 ಪಾನ್ ಕಾರ್ಡ್‌ಗಳನ್ನು ಮಾಡಿಸಿಕೊಂಡು ಒಂದೊಂದು ಬ್ಯಾಂಕ್ ಅಕೌಂಟ್ ನಂಬರ್‌ಗೆ ಒಂದೊಂದು ಪಾನ್ ಕಾರ್ಡ್ ನಂಬರ್ ಕೊಟ್ಟಿರ್ತಾರೆ. ಹೀಗಾಗಿ, ಅವರು ನಡೆಸೋ ಹಣದ ವಹಿವಾಟು ಇನ್‌ಕಮ್ ಟ್ಯಾಕ್ಸ್‌ನವರ ಲೆಕ್ಕಕ್ಕೇ ಸಿಗೋದಿಲ್ಲ. ಇದನ್ನು ತಪ್ಪಿಸೋಕೆ ಆದಾಯ ತೆರಿಗೆ ಇಲಾಖೆ ಹಾಗೂ ಕೇಂದ್ರ ಸರ್ಕಾರ ಈ ರೀತಿ ಲಿಂಕ್ ಮಾಡುವಂತೆ ಹೇಳಿತ್ತು.

suddiyaana