ಇಂದಿರಾ ಕ್ಯಾಂಟೀನ್‌ಗೆ ಹೊಸ ಟಚ್ ನೀಡಲು ಬಜೆಟ್ ನಲ್ಲಿ ತೀರ್ಮಾನ – ಯೋಜನೆಗೆ 100 ಕೋಟಿ ರೂ. ಮೀಸಲು

ಇಂದಿರಾ ಕ್ಯಾಂಟೀನ್‌ಗೆ ಹೊಸ ಟಚ್ ನೀಡಲು ಬಜೆಟ್ ನಲ್ಲಿ ತೀರ್ಮಾನ – ಯೋಜನೆಗೆ 100 ಕೋಟಿ ರೂ. ಮೀಸಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಲಕ್ಷಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಗಳ ಅಭಿವೃದ್ಧಿಗಾಗಿ ಬರೋಬ್ಬರಿ 100 ಕೋಟಿ ರೂ. ಮೀಸಲಿಡಲಾಗಿದೆ.

ಇದನ್ನೂ ಓದಿ: ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದು ಬಂಪರ್ ಗಿಫ್ಟ್ – ಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಪ್ರಾಧಿಕಾರ ರಚನೆ

2017ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಕಡಿಮೆ ದರದಲ್ಲಿ ಆಹಾರ ನೀಡುವ ಇಂದಿರಾ ಕ್ಯಾಂಟೀನ್ ಭಾರೀ ಜನಪ್ರಿಯವಾಗಿತ್ತು. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲೇ 175 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗಿತ್ತು. ಇದಲ್ಲದೆ ಹಲವು ಜಿಲ್ಲಾ ಕೇಂದ್ರಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಇದು ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿತ್ತು. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟಿನ್‌ ಮೂಲೆ ಗುಂಪಾಗಿತ್ತು. ಇದೀಗ ಈ ಯೋಜನೆಗೆ ಸಿಎಂ ಸಿದ್ದರಾಮಯ್ಯ ಮತ್ತೆ ಮರುಜೀವ ನೀಡುತ್ತಿದ್ದಾರೆ.

2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇಂದಿರಾ ಕ್ಯಾಂಟೀನ್ ಗಳ ಪರಿಶೀಲನೆ ಕುರಿತು ಅಧಿಕಾರಿಗಳಿಂದ ಮುಖ್ಯಮಂತ್ರಿ ವರದಿ ಕೇಳಿದ್ದರು. ಇಂದಿರಾ ಕ್ಯಾಂಟೀನ್‌ಗೆ ಹೊಸ ಟಚ್ ನೀಡಲು ನಿರ್ಧರಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಹಿಂದೆ ನೀಡ್ತಿದ್ದ ಫುಡ್ ಮೆನು ಬದಲಿಸಲು ನಿರ್ಧಾರ ಮಾಡಲಾಗಿದ್ದು, ಊಟದ ಮೆನು ಬದಲಾವಣೆ ಮಾಡಿ ಗುಣಮಟ್ಟದ ಶುಚಿ-ರುಚಿ ಊಟ ನೀಡಲು ನಿರ್ಧಾರ ಮಾಡಲಾಗಿದೆ. 2ನೇ ಹಂತದಲ್ಲಿ ಹೊಸ ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದೆ.

suddiyaana