ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಮೊಳಗಲಿದೆ ಬೆಂಗಳೂರಿನಿಂದ ಕಳುಹಿಸಿದ ಘಂಟೆಗಳ ನಾದ!
ಬಹುಕೋಟಿ ಹಿಂದೂಗಳ ಕನಸು ಹತ್ತಿರವಾಗುತ್ತಿದೆ. ಅಯೋಧ್ಯೆ ರಾಮಮಂದಿರ ಜನವರಿ 22ರಂದು ಲೋಕಾರ್ಪಣೆಯಾಗುತ್ತಿದ್ದು, ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಹಲವು ರಾಜ್ಯಗಳಿಂದ ಅಯೋಧ್ಯೆ ರಾಮಮಂದಿರಕ್ಕೆ ವಿವಿಧ ಕಾಣಿಕೆಗಳನ್ನು ನೀಡಲಾಗುತ್ತಿದೆ. ಇದೀಗ ಬೆಂಗಳೂರಿನ ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಲಾಗಿದೆ.
ಇದನ್ನೂ ಓದಿ: ವದಂತಿಗಳ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್!
ಬೆಂಗಳೂರಿನ ಬನಶಂಕರಿ ಒಂದನೇ ಹಂತದಲ್ಲಿ ಶ್ರೀರಾಮನ ಭಕ್ತರು, 2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಿದ್ದಾರೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದು, ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ ಎಂದು ವರದಿಯಾಗಿದೆ.
ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.