ಮೋದಿಯನ್ನ ಭೇಟಿಯಾದ ದೆಹಲಿ ಸಿಎಂ ರೇಖಾ ಗುಪ್ತಾ- ಹೊಸ ಸಿಎಂ ನಮೋ ಕಿವಿ ಮಾತು

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ತೆರಳಿ ಭೇಟಿಯಾದ್ರು. ದೆಹಲಿ ಸಿಎಂ ರೇಖಾ ಗುಪ್ತಾ ಮೋದಿಯವರಿಗೆ ಪುಷ್ಪ ಗುಚ್ಛ ನೀಡಿದರು. ದೆಹಲಿಯ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ರೇಖಾ ಗುಪ್ತಾ ಪ್ರಧಾನಿಯನ್ನು ಭೇಟಿಯಾಗುತ್ತಿರುವುದು ಇದೇ ಮೊದಲು. ಇಬ್ಬರೂ ನಾಯಕರು ಪ್ರಧಾನ ಮಂತ್ರಿಯವರ ನಿವಾಸದಲ್ಲಿ ಭೇಟಿಯಾದರು. ಪ್ರಧಾನಿ ಮೋದಿಯವರೊಂದಿಗಿನ ಭೇಟಿಯ ಬಳಿಕ ಮಾತನಾಡಿದ ಸಿಎಂ ರೇಖಾ ಗುಪ್ತಾ , “ಈ ದೆಹಲಿಯ ಮಗಳಿಗೆ ಮುಖ್ಯಮಂತ್ರಿಯಾಗಿ ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಮೋದಿಯವರಿಗೆ ಧನ್ಯವಾದ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ದುಡ್ಡು ಪ್ರಿಂಟ್‌ಗೆ ಎಷ್ಟು ಖರ್ಚಾಗುತ್ತೆ?- 500ರೂ.ಗಿಂತ 200ರೂ.ಗೆ ಜಾಸ್ತಿ ಖರ್ಚು!
ಮಾತುಕತೆ ವೇಳೆ ದೆಹಲಿ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೆಹಲಿ ಸರ್ಕಾರವು ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ವೇಗವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ದೆಹಲಿಯನ್ನು ಸ್ಮಾರ್ಟ್ ಮತ್ತು ಉತ್ತಮ ನಗರವನ್ನಾಗಿ ಮಾಡಲು ತಮ್ಮ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದರು. ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದು ಅಗತ್ಯ ಎಂದು ಪ್ರಧಾನಿ ಮೋದಿ ಮುಖ್ಯಮಂತ್ರಿಗಳಿಗೆ ಸೂಚಿಸಿದರು. ಇದರಿಂದ ಸಾರ್ವಜನಿಕರಿಗೆ ಸಾಧ್ಯವಾದಷ್ಟು ಬೇಗ ಪರಿಹಾರ ಸಿಗುತ್ತದೆ. ದೆಹಲಿಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಎಲ್ಲ ರೀತಿಯಲ್ಲೂ ಸಹಕರಿಸಲಿದೆ ಎಂದು ಮೋದಿ ಹೇಳಿದರು.
ಪ್ರಧಾನಮಂತ್ರಿಯವರ ನಿವಾಸಕ್ಕೆ ತೆರಳುವ ಮೊದಲು, ರೇಖಾ ಗುಪ್ತಾ ಅವರು ಬೆಳಿಗ್ಗೆ ಶಾಲಿಮಾರ್ ಬಾಗ್‌ನಲ್ಲಿರುವ ತಮ್ಮ ಮನೆಯ ಮೊದಲ ಮಹಡಿಯ ಬಾಲ್ಕನಿಯಿಂದ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ದೆಹಲಿ ಸಿಎಂ ಆಗಿ ಸೇವೆ ಸಲ್ಲಿಸಲು “ದೆಹಲಿಯ ಮಗಳಾದ” ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಗರದ ಎಲ್ಲಾ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಪರವಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನಾವು ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಪ್ರಧಾನಿ ಮೋದಿಯವರ ಆಯುಷ್ಮಾನ್ ಭಾರತ್ ಯೋಜನೆಯನ್ನು ಮೊದಲ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿದ್ದೇವೆ” ಎಂದು ಅವರು ಹೇಳಿದರು, ಒಂದು ದಿನವೂ ವ್ಯರ್ಥ ಮಾಡದೆ ಜನರ ಸೇವೆಯನ್ನು ಮುಂದುವರಿಸುವುದಾಗಿ ಭರವಸೆ ನೀಡಿದರು.