ದೆಹಲಿ ಸ್ಫೋ*ಟ ನಂತ್ರ ಫುಲ್ ಅಲರ್ಟ್ – ಗಾಯಾಳುಗಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದ ಅಮಿತ್ ಶಾ

ದೆಹಲಿ ಸ್ಫೋ*ಟ ನಂತ್ರ ಫುಲ್ ಅಲರ್ಟ್ – ಗಾಯಾಳುಗಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದ ಅಮಿತ್ ಶಾ

ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಫುಲ್ ಅಲರ್ಟ್ ಆಗಿದ್ದಾರೆ. ದೆಹಲಿ ಪೊಲೀಸ್ ಕಮಿಷನರ್‌ರಿಂದ ಸ್ಫೋಟದ ಬಗ್ಗೆ ಮಾಹಿತಿ ಪಡೆದು, ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳಸ್ಥಳಕ್ಕೆ ಧಾವಿಸಿದ್ದು, ತನಿಖೆ ಕೈಗೊಂಡಿದೆ. ಸ್ಫೋಟದ ತೀವ್ರತೆಗೆ ವಾಹನಗಳು ಛಿದ್ರಗೊಂಡಿದ್ದು, ಮೃತದೇಹಗಳು ಪತ್ತೆಯಾಗಿವೆ. ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ  ಅನ್ನೋ ಮಾಹಿತಿಯ್ನ  ಅಮಿತ್ ಶಾ  ನೀಡಿದ್ರು.   ಹಾಗೇ ಈ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂದು ಗಂಭೀರವಾಗಿ ತನಿಖೆ ಮಾಡಲಾಗುತ್ತದೆ. ತನಿಖೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಮಾಹಿತಿ ನೀಡಲಾಗುತ್ತದೆ ಅಂತ ತಿಳಿಸಿದ್ರು.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಅಮಿತ್ ಶಾ

ಘಟನಾ ಸ್ಥಳದ ಬಗ್ಗೆ ದೆಹಲಿ ಪೊಲೀಸ್‌ ಇಲಾಖೆ ಹಾಗೂ ವಿಶೇಷ ಘಟಕದಿಂದ ಮಾಹಿತಿ ಪಡೆದ ಅಮಿತ್‌ ಶಾ, ನಂತರ ಲೋಕನಾಯಕ್‌ ಆಸ್ಪತ್ರೆಗೆ ಭೇಟಿ, ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಕಾರು ಸ್ಫೋಟದ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ್ದು, ವೈದ್ಯರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ದೆಹಲಿ ಸ್ಫೋ*ಟ.. ಕರ್ನಾಟಕದಲ್ಲಿ ಹೈಅಲರ್ಟ್ – ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಪ್ರಧಾನಿ ಮೋದಿ ಜೊತೆ ಅಮಿತ್ ಶಾ ಚರ್ಚೆ 

ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಘಟನೆ ಕುರಿತು ಮಾಹಿತಿ ನೀಡಿದರು. ಕೈಗೊಳ್ಳಲಾದ ಭದ್ರತಾ ಕ್ರಮಗಳ ಕುರಿತು ವಿವರಿಸಿದರು. ಬಳಿಕ ಸ್ಫೋಟ ಸ್ಥಳಕ್ಕೆ ತೆರಳಿದ ಅಮಿತ್‌ ಶಾ ಅವರು ಪರಿಶೀಲನೆ ನಡೆಸಿದರು. ಪೊಲೀಸರು, ಭದ್ರತಾ ಪಡೆಗಳ ಜತೆ ಮಾತುಕತೆ ನಡೆಸಿದರು. ಸ್ಫೋಟದ ಕುರಿತು ಮಾಹಿತಿ ಪಡೆದುಕೊಂಡರು. ಸಮಗ್ರ ತನಿಖೆ ನಡೆಸುವಂತೆ ಆದೇಶ ನೀಡಿದರು. ನಂತರ ಜಯಪ್ರಕಾಶ್‌ ನಾರಾಯಣ್‌ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಇಂದು ಅಮಿತ್ ಶಾ ಸಭೆ

ನಿನ್ನೆ ಘಟನಾ ಸ್ಥಳಕ್ಕೆ ಶಾ ಭೇಟಿ ನೀಡಿದ್ದ ಅಮಿತ್ ಶಾ  ಇಂದು ಮಹತ್ವದ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಈ ಸಭೆಯು ದೇಶದ ಆಂತರಿಕ ಭದ್ರತಾ ಸನ್ನಿವೇಶವನ್ನು ಪರಿಶೀಲಿಸುವ ಮತ್ತು ಭವಿಷ್ಯದ ಸವಾಲುಗಳನ್ನು ಎದುರಿಸುವ ಕುರಿತು ಕೇಂದ್ರೀಕೃತವಾಗಲಿದೆ. ಸಭೆಯಲ್ಲಿ, ಭದ್ರತಾ ಪಡೆಗಳ ಮುಖ್ಯಸ್ಥರು, ದೆಹಲಿ ಪೊಲೀಸ್ ಆಯುಕ್ತರು, ಗುಪ್ತಚರ ಬ್ಯೂರೋ ಮುಖ್ಯಸ್ಥರು ಮತ್ತು ಆಂತರಿಕ ಭದ್ರತೆಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ದೆಹಲಿಯಲ್ಲಿ ಸಂಭವಿಸಿದ ಕಾರು ಬಾಂಬ್ ಸ್ಫೋಟದಂತಹ ಘಟನೆಗಳ ನಂತರ ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸುವ ಅಗತ್ಯತೆಯ ಕುರಿತು ವ್ಯಾಪಕ ಚರ್ಚೆ ನಡೆಸಲಾಗುತ್ತದೆ.

Kishor KV