ದೆಹಲಿ ಸ್ಫೋ*ಟ.. ಕರ್ನಾಟಕದಲ್ಲಿ ಹೈಅಲರ್ಟ್ – ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಇಡೀ ದೇಶವೇ ಬೆಚ್ಚಿಬಿದ್ದಿದೆ. ಈಗಾಗಲೇ ಸೋಮವಾರ ರಾತ್ರಿಯಿಂದಲೇ ದೇಶಾದ್ಯಂತ ಹೈಅಲರ್ಟ್ ಘೋಷಿಸಿದಲಾಗಿದೆ. ಅದರಂತೆ ಕರ್ನಾಟಕದಲ್ಲೂ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದೆ. ದೆಹಲಿ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು, ಮೈಸೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕೆಂಪುಕೋಟೆ ಬಳಿ ಭಯಾನಕ ಸ್ಫೋಟ– ಉಗ್ರರ ಅಟ್ಟಹಾಸಕ್ಕೆ10 ಮಂದಿ ಬಲಿ
ದೆಹಲಿ ಸ್ಫೋಟದ ಬಗ್ಗೆ ತಿಳಿದ ಬಳಿಕ ಮೈಸೂರು ಪೊಲೀಸರ ಜತೆ ಮಾತನಾಡಿದ್ದು, ರಾಜ್ಯಾದ್ಯಂತ ಭದ್ರತೆ ಬಿಗಿಗೊಳಿಸಲು ತಿಳಿಸಿದ್ದೇನೆ ಹೇಳಿದ್ದಾರೆ. ಕರ್ನಾಟಕದಲ್ಲೂ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜೊತೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಾದ ಮೆಜೆಸ್ಟಿಕ್ ಬಸ್ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರಿಗೆ ಜನರು ಸಹಕಾರ ನೀಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಏರ್ಪೋರ್ಟ್ಗೆ ಬರುವ & ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣಿಡಲಾಗಿದೆ. ಏರ್ಪೋಟ್ ಭದ್ರತೆಗೆ ಹೆಚ್ಚುವರಿ ಶಸ್ತ್ರ ಸಜ್ಜಿತ ಸಿಐಎಸ್ಎಫ್ ನಿಯೋಜನೆ ಜೊತೆಗೆ ವಿಮಾನ ನಿಲ್ದಾಣದ ಒಳ & ಹೊರ ಆವರಣದಲ್ಲಿ ಪ್ಯಾಟ್ರೋಲಿಂಗ್ ಗಸ್ತು ಹೆಚ್ಚಳ ಮಾಡಲಾಗಿದೆ. ಏರ್ಪೋರ್ಟ್ಗೆ ಬರುವ ಪ್ರಯಾಣಿಕರು, ಸಿಬ್ಬಂದಿಯ ತಪಾಸಣೆ ಮಾಡಲಾಗುತ್ತಿದೆ. ಪಾರ್ಕಿಂಗ್ ಏರಿಯಾ ಸೇರಿ ಎಲ್ಲಡೆ ಭದ್ರತಾ ಪಡೆ ಅಲರ್ಟ್ ಆಗಿದೆ.

ನೋಡಿರಿ

