ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಬಿಗ್ ರಿಲೀಫ್! – ಜೂನ್ 1 ರ ವರೆಗೆ ಜಾಮೀನು ಮಂಜೂರು

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಚುನಾವಣೆ ಹಿನ್ನೆಲೆ ಜೂನ್ 1 ರ ವರೆಗೆ ಜಾಮೀನು ಮಂಜೂರು ಮಾಡಲಾಗಿದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಗರಣ – ಮೈತ್ರಿ ಮುರಿಯೋದು ಫಿಕ್ಸ್?
ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಕಳೆದ ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ದೆಹಲಿಯ ಸಿಎಂ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿರಿಸಿದ್ದರು. ಇದೀಗ ಅನಾರೋಗ್ಯ ಹಾಗೂ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಜಾಮೀನು ಕೇಳಿದ್ದ ಅರವಿಂದ ಕೇಜ್ರಿವಾಲ್ ಗೆ ಜಾಮೀನು ಸಿಕ್ಕಿದೆ. ಇದೊಂದು ಅಪರೂಪದ ಪ್ರಕರಣವೆಂದು ಪರುಗಣಿಸಿ ಜೂ.1ರವರೆಗೆ ಜಾಮೀನು ಮಂಜೂರು ಮಾಡಲಾಗಿದೆ.
ಮೇ 25ರಂದು ದೆಹಲಿಯಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಜೂನ್ 1ರಂದು ದೇಶದಾದ್ಯಂತ ಕೊನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಿಗದಿಯಾಗಿದೆ. ದೆಹಲಿ ಸೇರಿದಂತೆ ದೇಶದಾದ್ಯಂತ ಚುನಾವಣಾ ಪ್ರಚಾರ ಮಾಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದ್ದು, ಜೂನ್ 1ರವರೆಗೆ ಬೇಲ್ ಸಿಕ್ಕಿದೆ.