ಬಿಆರ್​ಎಸ್​ ನಾಯಕಿ ಕೆ ಕವಿತಾಗೆ ಏಪ್ರಿಲ್​ 9ರವರೆಗೆ ನ್ಯಾಯಾಂಗ ಬಂಧನ

ಬಿಆರ್​ಎಸ್​ ನಾಯಕಿ ಕೆ ಕವಿತಾಗೆ ಏಪ್ರಿಲ್​ 9ರವರೆಗೆ ನ್ಯಾಯಾಂಗ ಬಂಧನ

ದೆಹಲಿ ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯವು ಏಪ್ರಿಲ್​ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅವರನ್ನು ಲಾಕಪ್‌ನಲ್ಲಿ ಇರಿಸುವ ಬದಲು ಇ.ಡಿ ತಿಹಾರ್‌ ಜೈಲಿಗೆ ವರ್ಗಾಯಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಹೆಚ್‌ಡಿಕೆ ಸ್ಪರ್ಧೆಗೆ ಜೆಡಿಎಸ್ ನಲ್ಲೇ ಕಿತ್ತಾಟ – ಒಂಟಿಯಾಗೇ ಮಂಡ್ಯ ಗೆಲ್ತಾರಾ ಸುಮಲತಾ?

ಮದ್ಯ ನೀತಿ ಹಗರಣದಲ್ಲಿ ಕವಿತಾ ಅವರನ್ನು ಮಾ.15 ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.  ಕಳೆದ ವಾರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿತ್ತು. ಈ ವೇಳೆ ಅವರ ಮೊಬೈಲ್‌ನಲ್ಲಿದ್ದ ಡೇಟಾವನ್ನು ಪರಿಶೀಲಿಸಲಾಗಿತ್ತು. ಇದೀಗ ಕವಿತಾ ಅವರಿಗೆ ದೆಹಲಿ ನ್ಯಾಯಾಲಯವು ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಲಾಕಪ್‌ನಲ್ಲಿ ಇರಿಸುವ ಬದಲು ಇ.ಡಿ ತಿಹಾರ್‌ ಜೈಲಿಗೆ ವರ್ಗಾಯಿಸುವ ಸಾಧ್ಯತೆ ಇದೆ. ಬಿಆರ್‌ಎಸ್‌ ನಾಯಕಿ ನಿಜವಾಗಿ 100 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನು ಎಎಪಿ ನಾಯಕರಿಗೆ ಪಾವತಿಸಲಾಗಿದೆ ಎಂದು ಆರೋಪವನ್ನು ಕವಿತಾ ಹೊತ್ತಿದ್ದಾರೆ.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರು ದೆಹಲಿ ಸರ್ಕಾರದ ಅಡಿಯಲ್ಲಿ ಮದ್ಯದ ಪರವಾನಗಿಗಾಗಿ ಎಎಪಿಗೆ 100 ಕೋಟಿ ಲಂಚವನ್ನು ಪಾವತಿಸಿದ ‘ಸೌತ್ ಗ್ರೂಪ್’ ನ ಪ್ರಮುಖ ಸದಸ್ಯೆ ಎಂದು ಇಡಿ ಆರೋಪಿಸಿದೆ. ಎಎಪಿ ಗೋವಾ ಮತ್ತು ಪಂಜಾಬ್ ಚುನಾವಣಾ ಪ್ರಚಾರಕ್ಕಾಗಿ ಈ ಹಣವನ್ನು ಬಳಸಿದೆ ಎಂದು ಇಡಿ ಆರೋಪ ಮಾಡಿದೆ.

Shwetha M