ಮದ್ಯನೀತಿ ಹಗರಣ ಕೇಸ್ – ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ನಿಂದ ಜಾಮೀನು
ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣ ಸಂಬಂಧ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ: ವಾರವಿಡೀ ತಾಂಡವ್ ಮದುವೆ ಬೇಕಿತ್ತಾ? – ಬೋರ್ ಹೊಡೆಸಿತಾ ಭಾಗ್ಯಲಕ್ಷ್ಮೀ?
ಕಳೆದ ಮಾರ್ಚ್ ನಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. 0 ದಿನಗಳ ವಿಚಾರಣೆಯ ನಂತರ ಅವರನ್ನು ಏಪ್ರಿಲ್ 1 ರಂದು ತಿಹಾರ್ ಜೈಲಿಗೆ ಕಳುಹಿಸಲಾಯಿತು. ಮೇ 10 ರಂದು, ಅವರನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಕಾಲ ಬಿಡುಗಡೆ ಮಾಡಲಾಗಿತ್ತು. ಅಷ್ಟೇ ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಸುಪ್ರೀಂ ಕೋರ್ಟ್ 156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಇಡಿ ಬಂಧಿಸಿದ್ದಾಗಲೂ ಸಹ ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ಗೆ ಜಾಮೀನು ನೀಡಿತ್ತು.