ಚುನಾವಣಾ ಆಯೋಗದ ವಿರುದ್ಧ ಸಿಡಿದೆದ್ದ INDIA! -ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹ

ಚುನಾವಣಾ ಆಯೋಗದ ವಿರುದ್ಧ ಸಿಡಿದೆದ್ದ INDIA! -ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹ

 ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಂದರೆ SIR ವಿಚಾರ ಇದೀಗ ದೇಶದ ರಾಜಕೀಯದಲ್ಲಿ ಮತ್ತೊಂದು ದೊಡ್ಡ ಸಂಘರ್ಷಕ್ಕೆ ಕಾರಣವಾಗಿದೆ. SIR ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳು ಕೈತಪ್ಪುವ ಸಾಧ್ಯತೆ ಇದೆ, ಪಾರದರ್ಶಕತೆ ಇಲ್ಲ ಎಂಬ ಆರೋಪ ಮಾಡುತ್ತಿರುವ ವಿರೋಧ ಪಕ್ಷಗಳ INDIA ಒಕ್ಕೂಟ ಇದೀಗ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ನೇರ ಸಮರಕ್ಕೆ ಇಳಿದಿದೆ.

ಇಂದು ದೆಹಲಿಯಲ್ಲಿ INDIA ಒಕ್ಕೂಟದ ಸಂಸದರು ಸಂಸತ್ತಿನ ಮಕರ ದ್ವಾರದಿಂದ ಚುನಾವಣಾ ಆಯೋಗದ ಕಚೇರಿಯತ್ತ ‘Save Democracy’ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಮುಖ ವಿರೋಧ ಪಕ್ಷದ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೂ ವಿರೋಧ ಪಕ್ಷಗಳು ಒತ್ತಾಯಿಸಿವೆ.

ಇದನ್ನೂ ಓದಿ: ಕ್ರೀಡಾಪಟುಗಳಿಗೆ BIG ಗುಡ್‌ನ್ಯೂಸ್! ಸರ್ಕಾರಿ -ಉದ್ಯೋಗದಲ್ಲಿ 2% ಮೀಸಲಾತಿ!

SIR ಪ್ರಕ್ರಿಯೆ ಹಾಗೂ ಮತದಾರರ ನೋಂದಣಿ ಸಂಬಂಧಿತ ಫಾರ್ಮ್-6ರಲ್ಲಿ ಆಗಿರುವ ಬದಲಾವಣೆಗಳ ಬಗ್ಗೆ INDIA ಒಕ್ಕೂಟ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಆದರೆ ಚುನಾವಣಾ ಆಯೋಗ ಮಾತ್ರ ವಿರೋಧ ಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ್ದು, SIR ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಇನ್ನೊಂದೆಡೆ, INDIA ಒಕ್ಕೂಟದ ಈ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷ ಭಾಗವಹಿಸದೇ ಪ್ರತ್ಯೇಕವಾಗಿ ಹೋರಾಟ ಮುಂದುವರಿಸುವ ನಿರ್ಧಾರ ಕೈಗೊಂಡಿದೆ. SIR ವಿಚಾರ ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದ್ದು, ಮತದಾರರ ಹಕ್ಕು ಮತ್ತು ಚುನಾವಣಾ ಪಾರದರ್ಶಕತೆ ಕುರಿತ ಚರ್ಚೆ ಮತ್ತಷ್ಟು ತೀವ್ರವಾಗಿದೆ.

Kishor KV

Leave a Reply

Your email address will not be published. Required fields are marked *