1,600ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಐವರು ಕಳ್ಳರನ್ನು ಪತ್ತೆ ಹಚ್ಚಿದ ಪೊಲೀಸರು!

1,600ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಐವರು ಕಳ್ಳರನ್ನು ಪತ್ತೆ ಹಚ್ಚಿದ ಪೊಲೀಸರು!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಪ್ರಗತಿ ಮೈದಾನದಲ್ಲಿ ಹಾಡಹಗಲೇ ಕಾರನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದೋಚಿರುವ ಪ್ರಕರಣವನ್ನು ಕೊನೆಗೂ ಭೇದಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಹಸು ಸಾಕಾಣಿಕೆಯಿಂದಲೇ ಅದೆಷ್ಟೋ ಯುವಕರಿಗೆ ಸ್ಪೂರ್ತಿ – ಕೋಟಿ ಬೆಲೆಯ ಬಂಗಲೆ ಕಟ್ಟಿದ ರೈತನಿಗೆ ಶಹಬ್ಬಾಸ್ ಗಿರಿ..!

ದರೋಡೆಕೋರರು ಹಾಡಹಗಲೇ ಬಂದು ಎರಡು ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿತ್ತು. ಈ ವಿಚಾರದಲ್ಲಿ ಪೊಲೀಸರ ನಿಷ್ಕ್ರಿಯತೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ರಾಜಧಾನಿಯಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಕುರಿತಂತೆ ಅನೇಕ ಪ್ರಶ್ನೆಗಳನ್ನು ಇದು ಹುಟ್ಟುಹಾಕಿತ್ತು. ಇದರಿಂದ ಎಚ್ಚೆತ್ತ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣವನ್ನು ತನಿಖೆ ಮಾಡುವ ವೇಳೆ ಪೊಲೀಸರು ರಾತ್ರಿ ವೇಳೆ ಗಸ್ತು ತಿರುಗಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹತ್ತು, ಇಪ್ಪತ್ತು ಮಂದಿಯನ್ನು ವಶಪಡಿಸಿಕೊಂಡಿರಬೇಕು ಎಂದು ನೀವು ಊಹಿಸಿರಬಹುದು. ಆದರೆ ನಿಮ್ಮ ಊಹೆ ತಪ್ಪು. ಪೊಲೀಸರು ಆರೋಪಿಗಳನ್ನು ಬಂಧಿಸುವುದಕ್ಕೂ ಮೊದಲು ಪೊಲೀಸರು ಬರೋಬ್ಬರಿ 1600 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಸುಮಾರು 200 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಪೊಲೀಸರು ಪ್ರಕರಣದ ಐವರು ಆರೋಪಿಗಳನ್ನು ವಶಕ್ಕೆ ಬಂಧಿಸಿದ್ದಾರೆ.  ಉಳಿದವರನ್ನು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ಧಾರೆ. ದೆಹಲಿ ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

suddiyaana