ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಬಂಧನಕ್ಕೆ ಹೆಚ್ಚಿದ ಒತ್ತಾಯ! – ಏನಿದು ವಿವಾದ?  

ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಬಂಧನಕ್ಕೆ ಹೆಚ್ಚಿದ ಒತ್ತಾಯ! – ಏನಿದು ವಿವಾದ?  

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ರಚಿತಾ ರಾಮ್‌ ಅಭಿನಯದ ಕ್ರಾಂತಿ ಸಿನಿಮಾ ಜನವರಿ 26ರಂದು ಬಿಡುಗಡೆಗೆ ಸಿದ್ದವಾಗಿದೆ. ಹೀಗಾಗಿ ಚಿತ್ರದ ಪ್ರಚಾರ ಕಾರ್ಯ ಅಬ್ಬರದಿಂದ ಸಾಗುತ್ತಿದೆ. ಇದೀಗ ಚಿತ್ರದ ಬಿಡುಗಡೆಗೂ ಮುನ್ನವೇ ಚಿತ್ರದ ನಾಯಕಿ ರಚಿತಾ ರಾಮ್‌ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ‘ಹಿಟ್ಲರ್ ಕಲ್ಯಾಣ’ದ ಲೀಲಾ ತಾಯಿ ಮಾಯ! – ಕೌಸಲ್ಯ ಪಾತ್ರಕ್ಕೆ ಹೊಸ ನಟಿ ಎಂಟ್ರಿ!

ನಟಿ ರಚಿತಾ ರಾಮ್ ಕಳೆದ ವಾರ ಕ್ರಾಂತಿ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ “ಇಷ್ಟು ವರ್ಷ ಜನವರಿ 26 ಅಂದರೆ ಗಣರಾಜ್ಯೋತ್ಸವ. ಆದರೆ ಈ ವರ್ಷ ಗಣರಾಜ್ಯೋತ್ಸವ ಮೆರೆತುಬಿಡಿ. ಕಾಂತ್ರಿಯ ಉತ್ಸವ ಅಷ್ಟೇ ಆಚರಿಸಿ” ಅಂತ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ದೇಶ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಲ್ಲದೇ ನಟಿ ರಚಿತಾ ರಾಮ್ ವಿರುದ್ದ ಮಂಡ್ಯ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

“ಭಾರತದ ಸಂವಿಧಾನಕ್ಕೆ ಹಾಗೂ ಗಣರಾಜ್ಯೋತ್ಸವಕ್ಕೆ ನಟಿ ರಚಿತಾ ರಾಮ್‌ ಅವರು ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು” ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವಲಿಂಗಯ್ಯ ಒತ್ತಾಯಿಸಿದ್ದಾರೆ.  ಇದೇ ಹೇಳಿಕೆಗೆ ಸಂಬಂಧಿಸಿ ನಟಿ ರಚಿತಾ ರಾಮ್ ವಿರುದ್ದ ಮಂಡ್ಯ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ನಟಿ ರಚಿತಾ ರಾಮ್‌ ಅವರ ಹೇಳಿಕೆ ದೇಶದ್ರೋಹದ ಹೇಳಿಕೆಯಾಗಿದೆ. ಅವರನ್ನು ಈ ದೇಶದಿಂದ ಗಡಿಪಾರು ಮಾಡಬೇಕು. ಅವರ ವಿವಾದಿತ ಹೇಳಿಕೆ ಹಿನ್ನೆಲೆಯಲ್ಲಿ ರಚಿತಾ ರಾಮ್‌ ವಿರುದ್ಧ ಮದ್ದೂರಿನ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ” ಎಂದು ಶಿವಲಿಂಗಯ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. “ಈ ದೇಶಕ್ಕಿಂತ ನಿಮ್ಮ ಚಿತ್ರ ದೊಡ್ಡದಲ್ಲ. ಅನಕ್ಷರಸ್ಥೆ ಥರ ಮಾತನಾಡಿ ಗೌರವ ಕಳೆದುಕೊಳ್ಳಬೇಡಿ. ನಿಮಗೆ ಈ ದೇಶದ ಮೇಲೆ ಗೌರವ ಇಲ್ಲದಿದ್ದರೆ, ಪಾಕಿಸ್ತಾನಕ್ಕೆ ಹೋಗಿ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ನೆಟ್ಟಿಗರು ಈ ಹೇಳಿಕೆಯನ್ನು ಟ್ರೋಲ್ ಸಹ ಮಾಡಿದ್ದರು.

suddiyaana