ಬರ ಪರಿಹಾರ ಶೀಘ್ರವೇ ಬಿಡುಗಡೆ ಮಾಡಿ – ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ಧರಾಮಯ್ಯ, ಸಚಿವರಿಂದ ಪ್ರತಿಭಟನೆ
ಬರ ಪರಿಹಾರ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದ ಕಾಂಗ್ರೆಸ್ಗೆ ಮೊದಲ ಹಂತದ ಜಯ ಸಿಕ್ಕಿದೆ. ಈ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ರಾಜ್ಯಕ್ಕೆ ಕೊಡಬೇಕಾದ ಬರ ಪರಿಹಾರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಿ ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: ಕಮಲ ಪಾಳಯಕ್ಕೆ ಬಿಗ್ ಶಾಕ್ – ಬಿಜೆಪಿ ಎಂಎಲ್ಸಿ ಕೆಪಿ ನಂಜುಂಡಿ ರಾಜೀನಾಮೆ
ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಶೀಘ್ರವಾಗಿ ಬರ ಪರಿಹಾರ ಹಣ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ ಕಾಂಗ್ರೆಸ್ ನಾಯಕರು, ಮೇಕೆದಾಟು, ಮಹದಾಯಿ ಯೋಜನೆಗೆ ಅನುಮತಿ ನೀಡಿ ಅಂತಾ ಕಾಂಗ್ರೆಸ್ ನಾಯಕರು ಆಗ್ರಹಿಸಿದರು. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು.
ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲ್ಲಿಯವರೆಗೆ ನಮ್ಮ ರೈತರಿಗೆ 650 ಕೋಟಿ ರೂಪಾಯಿಗಳನ್ನು ವಿತರಿಸಿದ್ದೇವೆ. ಕರ್ನಾಟಕಕ್ಕೆ ಪರಿಹಾರ ನೀಡದಿರಲು ನಿರ್ಮಲಾ ಸೀತಾರಾಮನ್ ಮತ್ತು ನರೇಂದ್ರ ಮೋದಿ ಕಾರಣ. ಅವರೇ ಬರ ಪರಿಹಾರ ನೀಡುತ್ತಿಲ್ಲ ಅಂತಾ ಆರೋಪಿಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಕೆಜೆ ಜಾರ್ಜ್, ಕೃಷ್ಣ ಬೈರೇಗೌಡ, ರಾಮಲಿಂಗಾ ರೆಡ್ಡಿ ಮುಂತಾದವರು ಭಾಗಿಯಾಗಿದ್ದರು.