ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಡೆಂಘೀ ಪ್ರಕರಣ – ಸೊಳ್ಳೆ ನಿಯಂತ್ರಣಕ್ಕೆ ಡ್ರೋನ್‌ ಬಳಕೆ!

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಡೆಂಘೀ ಪ್ರಕರಣ – ಸೊಳ್ಳೆ ನಿಯಂತ್ರಣಕ್ಕೆ ಡ್ರೋನ್‌ ಬಳಕೆ!

ನವದೆಹಲಿ: ಮುಂಗಾರಿನ ಅಂತ್ಯ ಸಮೀಪಿಸುತ್ತಿದ್ದಂತೆ ಇದೀಗ ಡೆಂಘೀ ಭೀತಿ ಹೆಚ್ಚಾಗತೊಡಗಿದೆ. ದೆಹಲಿ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಬಿಹಾರದಂತಹ ಹಲವಾರು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಡೆಂಘೀ ಪ್ರಕರಣಗಳು ಹಠಾತ್ ಹೆಚ್ಚಾಗತೊಡಗಿವೆ. ಪಶ್ಚಿಮ ಬಂಗಾಳದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಮುನ್ನೆಚ್ಚರಿಕಾ ಅಲ್ಲಿನ ಸರ್ಕಾರ ಹೊಸ ಕ್ರಮ ಕೈಗೊಂಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ ಡೆಂಘೀ ಪ್ರಕರಣ – ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ ಬಿಡುಗಡೆ

ಪಶ್ಚಿಮ ಬಂಗಾಳದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ವರ್ಷ ಪಶ್ಚಿಮ ಬಂಗಾಳದಲ್ಲಿ 30 ಕ್ಕೂ ಹೆಚ್ಚು ಜನರು ಡೆಂಘೀಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಡೋನ್ ಬಳಸಿ ಸೊಳ್ಳೆಗಳು ಉತ್ಪತ್ತಿಯಾಗುವ ಜಾಗಗಳಲ್ಲಿ ರಾಸಯನಿಕಗಳನ್ನು ಸಿಂಪಡಿಸಲಾಗುತ್ತಿದೆ. ಮುನ್ಸಿಪಲ್ ಕಾರ್ಪೊರೇಶನ್ ಮತ್ತು ರಾಜ್ಯ ಅಗತ್ಯ ವಸ್ತುಗಳ ಸರಬರಾಜು ನಿಗಮ ಜಂಟಿಯಾಗಿ ಡೋನ್ ಬಳಸಿ ಸೊಳ್ಳೆಗಳು ಉತ್ಪತ್ತಿಯಾಗುವ ಜಾಗಗಳಲ್ಲಿ ರಾಸಯನಿಕಗಳನ್ನು ಸಿಂಪಡಿಸುವ ಕಾರ್ಯ ಮಾಡುತ್ತಿದೆ.

ಈ ಬಗ್ಗೆ ಟಿಎಂಸಿ ನಾಯಕ ಕುನಾಲ್ ಘೋಷ್ ಮಾಹಿತಿ ನೀಡಿದ್ದು, ಮೆಟ್ರೊ, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು ಸೇರಿದಂತೆ ಡೆಂಘೀ ಹರಡುವ ಪ್ರಮುಖ ಸ್ಥಳಗಳಲ್ಲಿ ತಕ್ಷಣವೇ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಿ ಎಂದು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಈ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ಹೇಳಿದ್ದಾರೆ.

Shwetha M