ಬೆಂ-ಮೈ ದಶಪಥ ಟೋಲ್ ಶುಲ್ಕ ಹೆಚ್ಚಳಕ್ಕೆ ಬ್ರೇಕ್ – ದೇವನಹಳ್ಳಿ ಏರ್ಪೋರ್ಟ್ ರಸ್ತೆಯ ಟೋಲ್ ದರ ಹೈಕ್!
ಯಾವ್ಯಾವ ವಾಹನಗಳಿಗೆ ನೂತನ ದರ ಎಷ್ಟಿದೆ..?

ಬೆಂಗಳೂರು ಮೈಸೂರು ಎಕ್ಪ್ರೆಸ್ ವೇನಲ್ಲಿ 2 ವಾರಗಳಿಂದ ಟೋಲ್ ಶುಲ್ಕ ಸಂಗ್ರಹ ಮಾಡಲಾಗುತ್ತಿದೆ. ಆದರೆ ಟೋಲ್ ಸಂಗ್ರಹ ಆರಂಭವಾದ ಎರಡೇ ವಾರಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರವನ್ನ ಏ.22ರಷ್ಟು ಏರಿಕೆ ಮಾಡಿತ್ತು. ಆದರೆ ಜನರಿಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆಚ್ಚಳ ಆದೇಶವನ್ನ ಹಿಂಪಡೆದಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಹೆಚ್‌ಎಐ / NHAI) ಶೇಕಡಾ 22ರಷ್ಟು ಟೋಲ್ ದರ (Bengaluru Mysuru expressway toll price) ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಎನ್‌ಹೆಚ್‌ಎಐ ಮತ್ತೆ ಟೋಲ್ ದರ ಹೆಚ್ಚಳ ಮಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಇದು ಈಗಿರುವ ಟೋಲ್ಗಿಂತ ಶೇಕಡಾ 22ರಷ್ಟು ದರ ದುಬಾರಿಯಾಗಿತ್ತು. ಈ ಪರಿಷ್ಕೃತ ದರ ಇಂದು (ಏಪ್ರಿಲ್ 1) ರಿಂದ ಜಾರಿಗೆ ಬರಬೇಕಿತ್ತು. ಆದರೆ ಜನರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಆದೇಶ ವಾಪಸ್ ಪಡೆದಿದೆ.
ಇದನ್ನೂ ಓದಿ : ಅಧಿವೇಶನದಲ್ಲಿಯೇ ಅಶ್ಲೀಲ ಚಿತ್ರ ವೀಕ್ಷಿಸಿದ ಬಿಜೆಪಿ ಶಾಸಕ – ನೀಲಿಚಿತ್ರ ವೀಕ್ಷಣೆ ವಿಡಿಯೋ ವೈರಲ್!
ಮತ್ತೊಂದೆಡೆ ಬೆಂಗಳೂರಿನಿಂದ ದೇವನಹಳ್ಳಿಯ (Bengaluru-Devanahalli) ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Bengaluru International Airport) ಹೋಗುವ ಟೋಲ್ ದರ ಕೂಡ ಏರಿಕೆಯಾಗಿದೆ. ಏರ್ಪೋರ್ಟ್ ರಸ್ತೆಯ ನಿರ್ವಹಣೆ ಹೊತ್ತಿರುವ ಅಥಾಂಗ್ ಟೋಲ್ ವೇ ಪ್ರವೈಟ್ ಲಿಮಿಟೆಡ್ ಮಧ್ಯರಾತ್ರಿಯಿಂದಲೇ ಟೋಲ್ ದರವನ್ನು ಏರಿಸಿದೆ.
- ಕಾರು, ಜೀಪು, ವ್ಯಾನ್ ಲಘು ಮೋಟಾರು ವಾಹನ ಏಕಮುಖ ಸಂಚಾರಕ್ಕೆ 110 ರೂ. 24 ಗಂಟೆಯೊಳಗೆ ಹಿಂತಿರುಗುವ ಶುಲ್ಕ 170 ರೂ ನಿಗದಿ ಮಾಡಲಾಗಿದೆ. ಇಷ್ಟು ದಿನ ಏಕಮುಖ ಸಂಚಾರಕ್ಕೆ 105 ರೂ. ಹಾಗೂ ದ್ವಿಮುಖ ಸಂಚಾರ 165 ರೂಪಾಯಿ ಇತ್ತು. 3,555 ರೂಪಾಯಿಯಿದ್ದ ಮಾಸಿಕ ಪಾಸ್ ಶುಲ್ಕ 3,755 ರೂಪಾಯಿಗೆ ಏರಿಕೆಯಾಗಿದೆ.
- ಲಘು ವಾಣಿಜ್ಯ ವಾಹನ ಲಘು ಸರಕು ವಾಹನ ಮಿನಿ ಬಸ್- ಏಕಮುಖ ಸಂಚಾರಕ್ಕೆ 165 ರಿಂದ 170 ರೂ. ಗೆ ಏರಿಕೆ. ಹಿಂತಿರುಗುವ ಶುಲ್ಕ 245 ರಿಂದ 260 ರೂಪಾಯಿಗೆ ಏರಿಕೆ. ಮಾಸಿಕ ಪಾಸ್ 5465 ರೂ. ಯಿಂದ 5745 ರೂ. ಗೆ ಏರಿಸಲಾಗಿದೆ.
- ಟ್ರಕ್ ಬಸ್ 2 ಆಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 330 ರಿಂದ 345 ರೂ. ಗೆ ಏರಿಕೆ. ದ್ವಿಮುಖ ಸಂಚಾರಕ್ಕೆ 495 ರೂ. ನಿಂದ 520 ರೂ. ಗೆ ಏರಿಕೆ ಮಾಡಲಾಗಿದೆ. 10,990 ರೂಪಾಯಿ ಇದ್ದ ಮಾಸಿಕ ಪಾಸ್ 11,550 ರೂ. ಆಗಿದೆ.
- ಭಾರೀ ವಾಹನಗಳು 03 ರಿಂದ 06 ಅಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 500 ರಿಂದ 525 ರೂ. ದ್ವಿಮುಖ ಸಂಚಾರ 750 ರೂ. ನಿಂದ 790 ರೂ. 16,680 ರೂ. ಇದ್ದ ಮಾಸಿಕ ಪಾಸ್ 17, 525 ರೂ. ಹೆಚ್ಚಿಗೆಯಾಗಿದೆ.
- ಭಾರೀ ಗಾತ್ರದ ವಾಹನಗಳಿಗೆ 07 ಆಕ್ಸೆಲ್ ಹಾಗೂ ಅದಕ್ಕಿಂತ ಹೆಚ್ಚು ಆಕ್ಸೆಲ್ ವಾಹನಗಳಿಗೆ ಏಕಮುಖ ಸಂಚಾರಕ್ಕೆ 650 ರಿಂದ 685 ರೂ. ಗೆ ಏರಿಕೆ. ದ್ವಿಮುಖ 980 ರೂ. ನಿಂದ 1025 ರೂ. ಗೆ ಏರಿಕೆ. 21, 730 ರೂ. ಇದ್ದ ಮಾಸಿಕ ಪಾಸ್ 22, 830 ರೂಪಾಯಿಯಷ್ಟು ಹೆಚ್ಚಿಸಲಾಗಿದೆ. ಸ್ಥಳೀಯ ಮಾಸಿಕ ಪಾಸ್ 315 ರಿಂದ 330 ರೂಪಾಯಿಗೆ ಏರಿಕೆ (ಕಾರುಗಳಿಗೆ ಮಾತ್ರ ಅನ್ವಯವಾಗುತ್ತದೆ) ಮಾಡಲಾಗಿದೆ.