‘ಕಾಂಗ್ರೆಸ್ ಸರ್ಕಾರಕ್ಕೆ ಬಂದರೆ ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿ’ –ಡಿ.ಕೆ ಶಿವಕುಮಾರ್

‘ಕಾಂಗ್ರೆಸ್ ಸರ್ಕಾರಕ್ಕೆ ಬಂದರೆ ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿ’ –ಡಿ.ಕೆ ಶಿವಕುಮಾರ್

ರಣರಂಗದಲ್ಲಿ ಈಗ ಭಜರಂಗಬಲಿಯದ್ದೇ ಸುದ್ದಿ. ಯಾವಾಗ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ಬ್ಯಾನ್ ಮಾಡುವುದಾಗಿ ಹೇಳಿತ್ತೋ ಅಲ್ಲಿಂದ ಚುನಾವಣಾ ಅಖಾಡದಲ್ಲಿ ಧರ್ಮಯುದ್ಧವೂ ಶುರುವಾಗಿದೆ. ಇಷ್ಟೆಲ್ಲಾ ಬೆಳವಣಿಗೆಯ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಆಂಜನೇಯ ಹುಟ್ಟಿದ ಸ್ಥಳ ಅಂಜನಾದ್ರಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ವಿಶೇಷ ಮಂಡಳಿ ರಚನೆ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ:  ‘ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ’ – ಹೆಚ್.ಡಿ ಕುಮಾರಸ್ವಾಮಿ

ಮೈಸೂರಿನಲ್ಲಿ ಗುರುವಾರ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್, ವಿಶೇಷ ಪೂಜೆ ಸಲ್ಲಿಸಿದರು. ಗರ್ಭಗುಡಿ ಬಳಿ ರುದ್ರಾಕ್ಷಿ ಜಪ ಮಾಡಿದರು. ಈ ವೇಳೆ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಗೆ ಗಾಬರಿಯಾಗಿದೆ. ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸವಿದೆ. ಬಜರಂಗದಳ ಒಂದು ರಾಜಕೀಯ ಪಕ್ಷದ ಭಾಗ. ಹುಟ್ಟುವ ಎಲ್ಲವೂ ಬಸವ ಆಗುವುದಕ್ಕೆ ಸಾಧ್ಯವಿಲ್ಲ. ಹನುಮಂತನ ಹೆಸರಿಟ್ಟುಕೊಂಡವರೆಲ್ಲಾ ಹನುಮಂತ ಆಗಲು ಸಾಧ್ಯವೇ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಬಜರಂಗ ಬಲಿಯ ನಿಜವಾದ ಭಕ್ತರು ನಾವು. ಬಜರಂಗಿಯ ಕುಂಕುಮ ನನ್ನ ಹಣೆಯಲ್ಲಿಯೇ ಇದೆ. ಈ ನಾಡಿನಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಇತಿಹಾಸ ಸೃಷ್ಟಿಸಿದ ಆಂಜನೇಯ ದೇವಾಲಯ ಅಭಿವೃದ್ಧಿಗೆ ಕಾಂಗ್ರೆಸ್ ವಿಶೇಷ ಒತ್ತು ನೀಡಲಿದೆ. ಯುವಕರಿಗೆ ಆಂಜನೇಯನ ವಿಚಾರಗಳನ್ನು ಬೆಳೆಸಲು ವಿಶೇಷ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದರು.

suddiyaana