ನೋವಿನ ನಡುವೆ ದರ್ಶನ್ ಫ್ಯಾನ್ಸ್ ಗೆ ಗುಡ್‌ನ್ಯೂಸ್ – ಇದ್ರೆ ನೆಮ್ದಿಯಾಗ್ ಇರ್ಬೇಕು ಸಾಂಗ್ ರಿಲೀಸ್‌ಗೆ ಮುಹೂರ್ತ ಫಿಕ್ಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ನೋವಿನ ನಡುವೆ ಗುಡ್‌ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಡೆವಿಲ್ ತಂಡದಿಂದ ಬಿಗ್ ಅಪ್ಡೇಟ್ ಬಂದಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ʻಇದ್ರೆ ನೆಮ್ದಿಯಾಗಿರ್ಬೇಕುʼ ಹಾಡಿನ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಆಗಸ್ಟ್ 24 ಭಾನುವಾರ ಬೆಳಗ್ಗೆ 10- 05 ಕ್ಕೆ ದಿ ಡೆವಿಲ್‌ನ , ಮೊದಲನೆ ಹಾಡು ಬಿಡುಗಡೆಯಾಗಲಿದೆ ಎಂದು ಜೈಮಾತಾ ಕಂಬೈನ್ಸ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಂಡು ನಟ ದರ್ಶನ್ ಜೈಲುಪಾಲಾಗಿರುವುದು ಅವರ ಬಹು ನಿರೀಕ್ಷಿತ ಡೆವಿಲ್ ಸಿನಿಮಾದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಈಗಾಗಲೇ ರಿಲೀಸ್ ಆಗ್ಬೇಕಿದ್ದ ಡೆವಿಲ್ ಸಿನಿಮಾದ ಇದ್ರೆ ನೆಮ್ದಿಯಾಗರ್ಬೇಕು ಎಂಬ ಹಾಡಿನ ರಿಲೀಸ್ ಕೂಡ ಮುಂದೂಡಲಾಗಿತ್ತು. ಇದೀಗ ಈ ಹಾಡಿನ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ.
ಇದನ್ನೂ ಓದಿ: ತಗ್ಗದ ಅಬ್ಬರ.. 120 ಕೋಟಿಯತ್ತ ಸು ಫ್ರಮ್ ಸೋ! – ಸ್ಯಾಟಲೈಟ್, ಡಿಜಿಟಲ್ ಹಕ್ಕು ಮಾರಾಟದಲ್ಲೂ ದಾಖಲೆ!
ಬೇಲ್ ಕ್ಯಾನ್ಸಲ್ ಆಗುವ ಹಿಂದಿನ ದಿನ ಹಾಡಿನ ಕುರಿತು ಸ್ವತಃ ನಟ ದರ್ಶನ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಪೋಸ್ಟ್ನಲ್ಲಿ ಡೆವಿಲ್ ಮೂವಿಯ ಫಸ್ಟ್ ಸಿಂಗಲ್ ಬಗ್ಗೆ ಬರೆದುಕೊಂಡಿದ್ದರು. ಡೆವಿಲ್ ಮೂವಿಯ ಮೊದಲ ಹಾಡು ಇದ್ರೆ ನೆಮ್ದಿಯಾಗಿರ್ಬೇಕ್ ಆಗಸ್ಟ್ 15ರಂದು ಬೆಳಗ್ಗೆ 10.05ಕ್ಕೆ ರಿಲೀಸ್ ಆಗಲಿದೆ ಎಂದು ದರ್ಶನ್ ಬರೆದಿದ್ದರು. ಆದ್ರೆ ಅವರು ಬೇಲ್ 14ಕ್ಕೆ ಕ್ಯಾನ್ಸಲ್ ಆಗಿದ್ರಿಂದ ಅವರು ಜೈಲಿಗೆ ಹೋದ್ರು. ಹೀಗಾಗಿ ಸಾಂಗ್ ರಿಲೀಸ್ ಡೇಟ್ ಮುಂದಕ್ಕೆ ಹಾಕಲಾಗಿತ್ತು. ಸದ್ಯ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ದರ್ಶನ್ ಸೇರಿದಂತೆ ಇತರ ಕಲಾವಿದರು ಈ ಚಿತ್ರದ ಡಬ್ಬಿಂಗ್ ಕೆಲಸವನ್ನು ಮುಗಿಸಿದ್ದಾರೆ. ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸವೂ ನಡೆದಿತ್ತು.
ಇದ್ರೆ ನೆಮ್ದಿಯಾಗ್ ಇರ್ಬೇಕ್’ ಎಂಬ ಹಾಡು ಬಿಡುಗಡೆಗೂ ಮೊದಲೇ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಸಂಚಲನ ಮೂಡಿಸಿದೆ. ದಿ ಡೆವಿಲ್ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಇದು ದರ್ಶನ್ ಅವರೊಂದಿಗಿನ ಅವರ ಮೊದಲ ಸಹಯೋಗವನ್ನು ಗುರುತಿಸುತ್ತದೆ. ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಅವರ ಪ್ರಭಾವಶಾಲಿ ಸಂಗೀತಗಳಿಗೆ ಹೆಸರುವಾಸಿಯಾದ ಅಜನೀಶ್, ಇದೀಗ ಡೆವಿಲ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಕುತೂಹಲಕಾರಿಯಾಗಿ, ಚಿತ್ರದ ಆಡಿಯೋ ಹಕ್ಕುಗಳನ್ನು ಯೋಜನೆಯ ಪ್ರಾರಂಭದ ಸಮಯದಲ್ಲಿಯೇ ಸರಿಗಮ ಮ್ಯೂಸಿಕ್ ಲೇಬಲ್ ಪಡೆದುಕೊಂಡಿದೆ.

ನೋಡಿರಿ

