ಜೈಲಿನಲ್ಲಿದ್ದುಕೊಂಡೇ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ ಕೊಟ್ಟ ದಾಸ! – ಡೆವಿಲ್‌ ಟ್ರೈಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್!‌

ಜೈಲಿನಲ್ಲಿದ್ದುಕೊಂಡೇ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ ಕೊಟ್ಟ ದಾಸ! – ಡೆವಿಲ್‌ ಟ್ರೈಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್!‌

ನಟ ದರ್ಶನ್‌ ಜೈಲಿನಲ್ಲಿರುವಾಗಲೇ ಅವರ ಬಹುನಿರೀಕ್ಷಿತ ಸಿನಿಮಾ ಡೆವಿಲ್‌ ರಿಲೀಸ್‌ಗೆ ಸಜ್ಜಾಗಿದೆ. ಗಂಡನ ಪರವಾಗಿ ವಿಜಯಲಕ್ಷ್ಮೀ ಸಿನಿಮಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇವೆಲ್ಲದ್ರ ಮಧ್ಯೆ ಚಾಲೆಂಜಿಂಗ್‌ ಸ್ಟಾರ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ.

ಇದನ್ನೂ ಓದಿ: ಕಾಯಿ, ಕಾಯಿ ನುಗ್ಗೆಕಾಯಿ ಸಿಕ್ಕಾಪಟ್ಟೆ ಕಾಸ್ಟ್ಲಿ! – ನುಗ್ಗೆಕಾಯಿ, ಟೊಮ್ಯಾಟೋ ಬೆಲೆ ದುಬಾರಿ!

ನಟ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆಗೆ ಕೌಂಟ್‌ಡೌನ್‌ ಶುರುವಾಗಿದೆ. ಇದೇ ಡಿಸೆಂಬರ್ 11 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡುಗಳು ಸಿನಿಪ್ರೇಮಿಗಳ ಮನಸ್ಸು ಗೆದ್ದಿದೆ. ಇದೀಗ ದರ್ಶನ್‌ ಜೈಲಿನಲ್ಲಿರುವಾಗಲೇ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಇದೀಗ ಈ ಸಿನಿಮಾದ ಟ್ರೈಲರ್ ರಿಲೀಸ್‌ಗೆ ದಿನಾಂಕ ನಿಗದಿಯಾಗಿದೆ. ಇದೇ ಡಿಸೆಂಬರ್ 5ರಂದು ಬೆಳಗ್ಗೆ 10:05ಕ್ಕೆ ಡೆವಿಲ್ ಟ್ರೈಲರ್ ರಿಲೀಸ್ ಆಗಲಿದೆ.

ದರ್ಶನ್‌ ಇನ್ಸ್ಟಾಗ್ರಾಂ ಖಾತೆಯಲ್ಲಿ ಟ್ರೈಲರ್‌ ರಿಲೀಸ್‌ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಇದರ ಅನೌನ್ಸ್ಮೆಂಟ್ ವಿಭಿನ್ನವಾಗಿ ಮಾಡಿದೆ ಚಿತ್ರತಂಡ. ದರ್ಶನ್ ಅವರ ಧ್ವನಿಯಲ್ಲಿ ʼನಾನ್‌ ಬರ್ತಿದ್ದೀನಿ ಚಿನ್ನʼ ಅಂತ ಟ್ರೈಲರ್ ರಿಲೀಸ್ ದಿನಾಂಕ ಅನೌನ್ಸ್ ಮಾಡಿರೋದು ದರ್ಶನ್ ಫ್ಯಾನ್ಸ್‌ಗೆ ಮತ್ತಷ್ಟು ಖುಷಿಕೊಟ್ಟಿದೆ. ಈಗಾಗಲೇ ಡೆವಿಲ್ ಸಿನಿಮಾದ ಎರಡು ಹಾಡುಗಳು ರಿಲೀಸ್ ಆಗಿದ್ದು, ಟ್ರೈಲರ್‌ಗಾಗಿ ದರ್ಶನ್ ಫ್ಯಾನ್ಸ್ ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ.

Shwetha M