ಧರ್ಮಸ್ಥಳ ಪ್ರಕರಣಲ್ಲಿ ಸಮೀರ್‌ಗೆ ಬಂಧನದ ಭೀತಿ! – ಎಸ್ಕೇಪ್ ಆದ ಯೂಟ್ಯೂಬರ್ !

ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರುವ ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ವಿಡಿಯೋ ಸೃಷ್ಟಿ ಮಾಡಿದ್ದ ಯೂಟ್ಯೂಬರ್ ಸಮೀರ್‌ಗೂ ಈಗ ಬಂಧನದ ಭೀತಿ ಎದುರಾಗಿದೆ. ಪೊಲೀಸರು ಸಮೀರ್ ಮನೆ ಮುಂದೆ ಜಮಾಯಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:3 ವರ್ಷ.. 13 ಜನ್ರಿಗೆ ಗೇಟ್ ಪಾಸ್ – 2022 To 2025.. ಅದೆಷ್ಟು ಬದಲಾವಣೆ?
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಇಂದು ಪೊಲೀಸರು ಅರೆಸ್ಟ್ ಮಾಡಿದ್ರು. ಇದೀಗ ಬೆನ್ನಲ್ಲೇ ಯೂಟ್ಯೂಬರ್ ಸಮೀರ್‌ಗೂ ಕೂಡ ಬಂಧನ ಭೀತಿ ಎದುರಾಗಿದೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಯೂಟ್ಯೂಬರ್ ಸಮೀರ್ ಮನೆಯನ್ನು ಪೊಲೀಸರು ಸುತ್ತುವರೆದಿದ್ದು, ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆನಂದ್ ಎನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಆದರೆ, ಪೊಲೀಸರ ಆಗಮನದ ಸುಳಿವು ಸಿಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸಮೀರ್‌ನನ್ನು ವಶಕ್ಕೆ ಪಡೆದು ಬೆಳ್ತಂಗಡಿಗೆ ವಿಚಾರಣೆಗೆ ಕರೆತರಲು ಪೊಲೀಸರು ನಿರ್ಧರಿಸಿದ್ದರು. ಆದರೆ ಪೊಲೀಸರ ಆಗಮನದ ಸುಳಿವು ಸಿಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದಾನೆ. ಆತ ಮನೆಯಲ್ಲಿ ಇಲ್ಲ ಎಂದು ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಮೀರ್ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಜುಲೈ ತಿಂಗಳಲ್ಲಿಯೇ ಈತನ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸುಗಳು ದಾಖಲಾಗಿದ್ದವು. ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿ ವಿಡಿಯೋ ಮಾಡಿರುವುದು, ಜನರಲ್ಲಿ ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿರುವುದು ಈ ಪ್ರಕರಣಗಳಾಗಿವೆ. ಬೆಳ್ತಂಗಡಿ ಪೊಲೀಸರ ಆಗಮನ ಸಮೀರ್ ತಿಳಿದದ್ದು ಹೇಗೆ, ಆತನಿಗೆ ಮಾಹಿತಿ ನೀಡುವವರು ಇಲಾಖೆಯಲ್ಲೇ ಇದ್ದಾರೆಯೇ ಎಂಬ ಪ್ರಶ್ನೆಯೂ ಮೂಡಿದೆ.

ನೋಡಿರಿ

