ಚಾಂಪಿಯನ್ ಆದ ಬೆನ್ನಲ್ಲೇ ಆಸ್ಪತ್ರೆಗೆ ತೆರಳಿದ ಧೋನಿ – ಮೊಣಕಾಲಿನ ತಪಾಸಣೆ ಮಾಡಿಸಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ

ಚಾಂಪಿಯನ್ ಆದ ಬೆನ್ನಲ್ಲೇ ಆಸ್ಪತ್ರೆಗೆ ತೆರಳಿದ ಧೋನಿ – ಮೊಣಕಾಲಿನ ತಪಾಸಣೆ ಮಾಡಿಸಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ

ಐಪಿಎಲ್‌ನಲ್ಲಿ 5ನೇ ಬಾರಿ ಕಪ್ ಎತ್ತಿ ಹಿಡಿದು ದಾಖಲೆ ಬರೆದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ. ತನ್ನ ತಂಡವನ್ನು ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಮಾಡಿದ ಬೆನ್ನಲ್ಲೇ ಎಂಎಸ್ ಧೋನಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಐಪಿಎಲ್‌ನ ಪಂದ್ಯಗಳಲ್ಲಿ ಧೋನಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು.

ಇದನ್ನೂ ಓದಿ: ಚೆನ್ನೈ ಗೆದ್ದ ಖುಷಿಯಲ್ಲಿ ಜಡೇಜಾರನ್ನ ತಬ್ಬಿ ಕಣ್ಣೀರಿಟ್ಟ ಧೋನಿ – ನಿವೃತ್ತಿಗೆ ಇದು ಸರಿಯಾದ ಸಮಯ ಎಂದಿದ್ದೇಕೆ ಮಾಹಿ?

ಐಪಿಎಲ್ 2023ರಲ್ಲಿ, ಮೊದಲ ಪಂದ್ಯದಲ್ಲಿಯೇ ಧೋನಿ ಮೊಣಕಾಲು ಗಾಯಕ್ಕೆ ತುತ್ತಾಗಿದ್ದರು. ಇದು ಅಭಿಮಾನಿಗಳ ಗಮನಕ್ಕೆ ಬಂದಿದ್ದು, ಏಪ್ರಿಲ್ 12 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ. ಆ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಮತ್ತು ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ ಕೂಡ ಧೋನಿ ಇಂಜುರಿಯ ಬಗ್ಗೆ ಹೇಳಿಕೆ ನೀಡಿದ್ದರು. ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಧೋನಿ ಮೊಣಕಾಲಿನ ಚಿಕಿತ್ಸೆಗಾಗಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ, ಧೋನಿ ಅಲ್ಲಿಯೇ ದಾಖಲಾಗುವ ಸಾಧ್ಯತೆಗಳಿವೆ.

suddiyaana