ಧ್ರುವ್ ರಾಠಿ ಪೊಲೀಸ್ ವಶಕ್ಕೆ! ಏನಿದು ದಿಢೀರ್ ಬೆಳವಣಿಗೆ?

ಧ್ರುವ್ ರಾಠಿ ಪೊಲೀಸ್ ವಶಕ್ಕೆ! ಏನಿದು ದಿಢೀರ್ ಬೆಳವಣಿಗೆ?

ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳ ಬಗ್ಗೆ ವಿಡಿಯೋಗಳ ಮೂಲಕ ಗಮನ ಸೆಳೆಯುವ ಜನಪ್ರಿಯ ಯೂಟ್ಯೂಬರ್ ಧ್ರುವ್ ರಾಠಿ ಇದೀಗ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಅಕ್ಟೋಬರ್ 10ರ ಬೆಳಿಗ್ಗೆ ಗುರುಗ್ರಾಮ್‌ನ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಅಷ್ಟಕ್ಕೂ ಈ ದಿಢೀರ್ ಪೊಲೀಸ್ ಕ್ರಮಕ್ಕೆ ಕಾರಣವೇನು? ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಲು ಉದ್ದೇಶಿಸಿದ್ದ ಪ್ರತಿಭಟನೆಯಲ್ಲಿ ಧ್ರುವ್ ರಾಠಿ ಭಾಗವಹಿಸುವ ನಿರೀಕ್ಷೆಯಿತ್ತು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸುವುದು ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ವಿಚಾರವಾಗಿ ಪ್ರತಿಭಟನೆ ನಡೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು.

ಇದನ್ನೂ ಓದಿ: 3 ಕೋಟಿ ಬಜೆಟ್ 30 ಕೋಟಿ ಕಲೆಕ್ಷನ್ – ಪ್ರೇಮದ ಊರಿಗೆ ಪ್ಯಾನ್ IND ಕನಸು

ಪ್ರತಿಭಟನೆಗೆ ಅನುಮತಿ ಇಲ್ಲದಿರುವುದು ಮತ್ತು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ಧ್ರುವ್ ರಾಠಿ ಅವರನ್ನು ವಶಕ್ಕೆ ಪಡೆದಿರುವುದಕ್ಕೆ ಸಂಬಂಧಿಸಿದ ಸಂಪೂರ್ಣ ಅಧಿಕೃತ ವಿವರಗಳು ಇನ್ನಷ್ಟು ಸ್ಪಷ್ಟವಾಗಬೇಕಿದೆ.

ಈ ಬೆಳವಣಿಗೆಯ ಬೆನ್ನಲ್ಲೇ ಧ್ರುವ್ ರಾಠಿ ಅವರನ್ನು ಬಿಡುಗಡೆ ಮಾಡುವಂತೆ CJP ಆಗ್ರಹಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆ ಈಗಾಗಲೇ ಚರ್ಚೆಗೆ ಕಾರಣವಾಗಿದೆ.ಇದು ಕೇವಲ ಮುನ್ನೆಚ್ಚರಿಕೆ ಕ್ರಮವೇ ಅಥವಾ ಇದರ ಹಿಂದೆ ಬೇರೆ ಕಾರಣಗಳಿವೆಯೇ? ಮುಂದಿನ ಬೆಳವಣಿಗೆಗಳ ಮೇಲೆ ಎಲ್ಲರ ಗಮನ ನೆಟ್ಟಿದೆ.

Kishor KV

Leave a Reply

Your email address will not be published. Required fields are marked *