ಟಾಕ್ಸಿಕ್ ಅಬ್ಬರಕ್ಕೆ ಹೆದರಿತಾ ಧುರಂಧರ್ 2 ? – ಚೇಂಜ್ ಆಗುತ್ತಾ ಧುರಂಧರ್ ರಿಲೀಸ್ ಡೇಟ್‌?

ಟಾಕ್ಸಿಕ್ ಅಬ್ಬರಕ್ಕೆ ಹೆದರಿತಾ ಧುರಂಧರ್ 2 ? – ಚೇಂಜ್ ಆಗುತ್ತಾ ಧುರಂಧರ್ ರಿಲೀಸ್ ಡೇಟ್‌?

ಟಾಕ್ಸಿಕ್  ಮತ್ತು  ಧುರಂಧರ್ 2 ಸಿನಿಮಾಗಳ ನಡುವೆ ಭರ್ಜರಿ ಸ್ಪರ್ಧೆ ಏರ್ಪಟ್ಟಿದೆ. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಅದೇ ದಿನ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ ‘ಧುರಂಧರ್ 2’ ಸಿನಿಮಾ ಬಿಡುಗಡೆ ಮುಂದೂಡಲಾಗುತ್ತದೆ ಎನ್ನಲಾಗುತ್ತಿದೆ. ನಿನ್ನೆಯಷ್ಟೆ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡಿದೆ. ಇದೀಗ ‘ಟಾಕ್ಸಿಕ್’ಗೆ ಠಕ್ಕರ್ ಕೊಡಲು ‘ಧುರಂಧರ್ 2’ ಸಿನಿಮಾದ ಟ್ರೈಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಟ್ರೈಲರ್​​ನಲ್ಲಿಯೇ ಸಿನಿಮಾದ ಅಧಿಕೃತ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟ ಮಾಡಲಿದೆ ಚಿತ್ರತಂಡ.

ಇದನ್ನೂ ಓದಿ: ಮತ್ತೊಂದು ಎಟಿಎಂ ದರೋಡೆ – 3 ಕೋಟಿಯಷ್ಟು ಹಣ ಲಪಟಾಯಿಸಿದ ಕಂಪನಿ ಸಿಬ್ಬಂದಿ

ಧುರಂಧರ್ 2’ ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದ್ದು, ನಿಗದಿತ ಸಮಯಕ್ಕೆ ಸಿನಿಮಾದ ಚಿತ್ರೀಕರಣ ಮುಗಿಯುವುದಿಲ್ಲ ಎನ್ನಲಾಗುತ್ತಿದೆ. ವಾರದ ಹಿಂದೆ ಸಹ ಮುಂಬೈನಲ್ಲಿ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿತ್ತು. ಮುಂಬೈ ಮಹಾನಗರ ಪಾಲಿಕೆಯ ನಿಯಮಗಳನ್ನು ಉಲ್ಲಂಘಿಸಿ ಚಿತ್ರೀಕರಣ ಮಾಡಿದ್ದಕ್ಕೆ ಚಿತ್ರತಂಡದ ವಿರುದ್ಧ ದೂರು ಸಹ ದಾಖಲಾಗಿದೆ. ಚಿತ್ರೀಕರಣಕ್ಕೆ ಬಳಸಿದ್ದ ಕೆಲವು ವಸ್ತುಗಳನ್ನು ಸಹ ಸೀಜ್ ಮಾಡಲಾಗಿದೆ. ಚಿತ್ರೀಕರಣ ತಡವಾಗುತ್ತಿರುವ ಕಾರಣದಿಂದಾಗಿ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೂಡ ತಡವಾಗುವ ಸಾಧ್ಯತೆ ಇದ್ದು, ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಲಿದೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ.

ಪಿಂಕ್‌ವಿಲ್ಲಾ ವರದಿಯ ಪ್ರಕಾರ, ರಣವೀರ್ ಸಿಂಗ್ ಬಹು ನಿರೀಕ್ಷಿತ ಸಿನಿಮಾ ‘ಧುರಂಧರ್ 2’ ಟ್ರೈಲರ್ ಮಾರ್ಚ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವು ಈದ್ ಹಬ್ಬದ ಪ್ರಯುಕ್ತ ತೆರೆಗೆ ಬರಲು ಸಿದ್ಧವಾಗಿದ್ದು, ಅದಕ್ಕೂ ಮುನ್ನ ಟ್ರೈಲರ್ ಮೂಲಕ ಪ್ರೇಕ್ಷಕರನ್ನು ಸೆಳೆಯಲು ಚಿತ್ರತಂಡ ಮಾಸ್ಟರ್ ಪ್ಲಾನ್ ಮಾಡಿದೆ. ರಣ್ವೀರ್ ಸಿಂಗ್ ಅವರನ್ನು ಎರಡು ಲುಕ್​​ಗಳಲ್ಲಿ ‘ಧುರಂಧರ್ 2’ ಟ್ರೈಲರ್​​ನಲ್ಲಿ ತೋರಿಸಲಾಗುತ್ತದೆ ಎನ್ನಲಾಗುತ್ತಿದೆ. ಜೊತೆಗೆ ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಟ್ರೈಲರ್​​ನಲ್ಲಿ ಘೋಷಿಸಲಾಗುತ್ತದೆಯಂತೆ.

ಇನ್ನು ಕನ್ನಡಿಗರ ಹೆಮ್ಮೆಯ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾದ ಟೀಸರ್ ನಿನ್ನೆ ಬಿಡುಗಡೆಯಾಗಿ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರದ ಟೀಸರ್‌ನಲ್ಲಿ ಯಶ್ ಅವರ ಸ್ಟೈಲಿಶ್ ಲುಕ್ ಮತ್ತು ಹಿನ್ನೆಲೆ ಸಂಗೀತ ಅಭಿಮಾನಿಗಳಿಗೆ ಹಬ್ಬದೂಟ ಬಡಿಸಿದೆ. ‘ಧುರಂಧರ್ 2’ ಅಪ್‌ಡೇಟ್ ಬರುವ ಸಮಯದಲ್ಲೇ ಯಶ್ ಅವರ ‘ಟಾಕ್ಸಿಕ್’ ಹವಾ ಶುರುವಾಗಿರುವುದು ಸಿನಿರಂಗದಲ್ಲಿ ತೀವ್ರ ಪೈಪೋಟಿಗೆ ನಾಂದಿ ಹಾಡಿದೆ.

Kishor KV

Leave a Reply

Your email address will not be published. Required fields are marked *