ಬೆಳಗಾವಿಯ ಖಾನಾಪುರದಲ್ಲಿ ಪ್ರವಾಹ ಭೀತಿ – 40 ಗ್ರಾಮಗಳ ಸಂಪರ್ಕ ಕಡಿತ

ಬೆಳಗಾವಿಯ ಖಾನಾಪುರದಲ್ಲಿ ಪ್ರವಾಹ ಭೀತಿ – 40 ಗ್ರಾಮಗಳ ಸಂಪರ್ಕ ಕಡಿತ

ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಬೆಳಗಾವಿ ಜಿಲ್ಲೆಯ ಏಳು ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಮಲಪ್ರಭಾ, ಘಟಪ್ರಭಾ, ಕೃಷ್ಣಾ ನದಿ ಸೇರಿ ಏಳು ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳ ಮೇಲೆ ನಿಗಾ ಇಡಲಾಗುತ್ತಿದೆ. ಖಾನಾಪುರ ತಾಲೂಕಿನ ಹಾಲತ್ರಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಖಾನಾಪುರ ತಾಲೂಕಿನ ಅಶೋಕ ನಗರದ ಬಳಿ ಪ್ರವಾಹ ಭೀತಿ ಎದುರಾಗಿದ್ದು ಸೇತುವೆ ಮುಳುಗುವ ಆತಂಕ ಎದುರಾಗಿದೆ.

ಇದನ್ನೂ ಓದಿ: ಗಂಗಾನದಿ ನೀರಿನ ಜೊತೆ ಗ್ರಾಮಕ್ಕೆ ನುಗ್ಗಿದ ಮೊಸಳೆಗಳು – ಹರಿದ್ವಾರದಲ್ಲಿ ಜನರಿಗೆ ಜೀವಭಯ..!

ಅಶೋಕ ನಗರದಲ್ಲಿ ಸೇತುವೆ ಮುಳುಗಿದರೆ 40 ಹಳ್ಳಿಗಳಿಗೆ ಸಂಪರ್ಕ ಕಡಿತಗೊಳ್ಳಲಿದೆ. ಸೇತುವೆ ಮುಳುಗಿದರೆ ಹೆಮ್ಮಡಗಾ, ಅಶೋಕ ನಗರ, ಗವಾಳಿ, ಪಾಸ್ತೊಳಿ ಸೇರಿದಂತೆ 40 ಗ್ರಾಮಗಳಿಗೆ ಸಂಪರ್ಕ ಕಡಿತಗೊಳ್ಳಲಿದೆ. ಸೇತುವೆ ಮುಳುಗಡೆಗೆ ಕೇವಲ ಅರ್ಧ ಅಡಿಯಷ್ಟೇ ನೀರು ಬಾಕಿ ಇದೆ.

ಬೆಳಗಾವಿ ಜಿಲ್ಲೆಯ 83 ಸಂಪರ್ಕ ಸೇತುವೆಗಳ ಮೇಲೆ ಜಿಲ್ಲಾ ಪೊಲೀಸರು ನಿಗಾ ಇಟ್ಟಿದ್ದಾರೆ. ನದಿಗಳ ಮೇಲೆ ಎಚ್ಚರಿಕೆಯಿಂದ ಓಡಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಖಾನಾಪುರ ತಾಲೂಕು ಬೆಳಗಾವಿಯ ಜಿಲ್ಲಾ ಕೇಂದ್ರದಿಂದ 30 ಕಿಲೋಮೀಟರ್ ದೂರದಲ್ಲಿದೆ ಮತ್ತು ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿದೆ. ಇಲ್ಲಿ ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆಯಾಗುತ್ತದೆ. ಈ ಭಾಗದ ನಾಗರಗಾಳಿ, ಗುಂಜಿ, ಲೋಂಡಾ, ಹೆಮ್ಮಡಗಾ, ನೇರಸೆ, ನಿಲವಡೆ, ಜಾಂಬೋಟಿ ಮತ್ತು ಕಣಕುಂಬಿ ಗ್ರಾಮಗಳು ಮಳೆಯಿಂದ ಹೆಚ್ಚು ಹಾನಿಗೊಳಗಾಗಿದ್ದು, ಇಲ್ಲಿನ ನಿವಾಸಿಗಳು ಸಮೀಪದ ಪಟ್ಟಣಗಳು ಮತ್ತು ಖಾನಾಪುರದ ತಾಲೂಕು ಕೇಂದ್ರದೊಂದಿಗೆ ಸಂಪರ್ಕ ಕಳೆದುಕೊಂಡಿದ್ದಾರೆ. ಸಾರ್ವಜನಿಕರ ಸುರಕ್ಷತೆಗಾಗಿ, ಜಲಾವೃತವಾಗಿರುವ ರಸ್ತೆಗಳ ಎರಡೂ ತುದಿಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

suddiyaana