ಬೀದಿಗೆ ಬಂತು ಎಟಿಎಂ ಸರ್ಕಾರದ ಗುದ್ದಾಟ! – ನಾರದನ ತುತ್ತೂರಿ ಊದುತ್ತಿರುವುದು ಯಾರು? – ಬಿಜೆಪಿ ಟ್ವೀಟ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆಯುವುದರೊಳಗೆ ಗದ್ದುಗೆ ಗುದ್ದಾಟ ಆರಂಭವಾಗಿದೆ. ಆದರೆ ಇದು ಮಾಧ್ಯಮಗಳ ಸೃಷ್ಟಿ ಅಂತಾ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ‘ಮಾಧ್ಯಮ’ ಅಂದರೆ ಯಾರು ಸ್ವಾಮೀ? ಹೆಚ್. ಸಿ. ಮಹಾದೇವಪ್ಪ ಅವರಾ? ಅಥವಾ ಸತೀಶ್ ಜಾರಕಿಹೊಳಿ ಅವರಾ? ಅಂತ ಪ್ರಶ್ನಿಸಿ ಒಂದು ತಿಂಗಳಲ್ಲೇ ಬೀದಿಗೆ ಬಂತು ಗದ್ದುಗೆಗಾಗಿ ಎಟಿಎಂ ಸರ್ಕಾರದ ಗುದ್ದಾಟ ಅಂತ ವ್ಯಂಗ್ಯವಾಡಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಸಿದ್ದರಾಮಯ್ಯನವರೇ, ಹೌದಾ ‘ಮುಖ್ಯಮಂತ್ರಿ ಬದಲಾವಣೆ’ ಎಂಬುದು ಮಾಧ್ಯಮ ಸೃಷ್ಟಿಯೇ? ‘ಮಾಧ್ಯಮ’ ಅಂದ್ರೆ ಯಾರು ಸ್ವಾಮೀ? ಹೆಚ್. ಸಿ. ಮಹಾದೇವಪ್ಪ ಅವರಾ ಅಥವಾ ಸತೀಶ್ ಜಾರಕಿಹೊಳಿ ಅವರಾ…? ಸಚಿವರಾದ ಎಂ. ಬಿ. ಪಾಟೀಲ್ ಅವರಾ ಅಥವಾ ಕೆ. ಎನ್. ರಾಜಣ್ಣ ಅವರಾ? ನಾರದನ ತುತ್ತೂರಿ ಊದುತ್ತಿರುವುದು ಯಾರು? ಅಣ್ಣನನ್ನು ಮುಖ್ಯಮಂತ್ರಿ ಆಗಿ ನೋಡಲು ಕಾಯುತ್ತಿರುವ ಡಿ. ಕೆ. ಸುರೇಶ್ ಅವರು ಆಕ್ರಂದಿಸುವ ಮೊದಲು ಉತ್ತರಿಸಿ ಎಂದು ಬಿಜೆಪಿ ಸವಾಲು ಹಾಕಿದೆ.
ಮಾನ್ಯ ಸಿದ್ದರಾಮಯ್ಯರವರೇ,
ಹೌದಾ ‘ಮುಖ್ಯಮಂತ್ರಿ ಬದಲಾವಣೆ’ ಎಂಬುದು ಮಾಧ್ಯಮ ಸೃಷ್ಟಿಯೇ?‘ಮಾಧ್ಯಮ’ ಅಂದ್ರೆ ಯಾರು ಸ್ವಾಮೀ?
ಹೆಚ್. ಸಿ. ಮಹಾದೇವಪ್ಪ ಅವರಾ ಅಥವಾ ಸತೀಶ್ ಜಾರಕಿಹೊಳಿ ಅವರಾ…?
ಸಚಿವರಾದ ಎಂ. ಬಿ. ಪಾಟೀಲ್ ಅವರಾ ಅಥವಾ ಕೆ. ಎನ್. ರಾಜಣ್ಣ ಅವರಾ?
ನಾರದನ ತುತ್ತೂರಿ ಊದುತ್ತಿರುವುದು ಯಾರು?
ಅಣ್ಣನನ್ನು ಮುಖ್ಯಮಂತ್ರಿ… pic.twitter.com/S8InHGkj5t
— BJP Karnataka (@BJP4Karnataka) June 19, 2023
ಇದನ್ನೂ ಓದಿ: ಫ್ರೀ ಬಸ್ ಟಿಕೆಟ್ ಪ್ರಯಾಣಕ್ಕೆ ಹೊಸ ಮಾರ್ಗಸೂಚಿ! – ವಾರಕ್ಕೆ ಮುಂಚೆ ಟಿಕೆಟ್ ಬುಕ್ಕಿಂಗ್ ಕಡ್ಡಾಯ?
ರಾಜ್ಯದ 20 ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಆದರೆ ಕರ್ನಾಟಕ ಕಾಂಗ್ರೆಸ್ ನಾಯಕರು ಮಾತ್ರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ರವರೇ ಇರಬೇಕೆಂದು ಒಂದು ಬಣ, ಶಿವಕುಮಾರ್ ಆಗಬೇಕೆಂದು ಇನ್ನೊಂದು ಬಣ, ಇವರಿಬ್ಬರೂ ಬೇಡ ಎಂದು ಮತ್ತೊಂದು ಬಣ ಪಿತೂರಿಯಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ಸಿಗರಿಗೆ ಬರವಾದರೂ ಒಂದೇ, ನೆರೆ ಬಂದರೂ ಒಂದೇ ಎಂದು ಬಿಜೆಪಿ ಲೇವಡಿ ಮಾಡಿದೆ.
ಒಂದು ತಿಂಗಳಲ್ಲೇ ಬೀದಿಗೆ ಬಂತು ಗದ್ದುಗೆಗಾಗಿ ಎಟಿಎಂ ಸರ್ಕಾರದ ಗುದ್ದಾಟ..! ಎಂ.ಬಿ ಪಾಟೀಲ್ ಅವರು ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಇನ್ನು ಡಿಕೆ ಸುರೇಶ್ ಅವರು ಎಂ. ಬಿ. ಪಾಟೀಲ್ ಹೇಳಿಕೆಗೆ ಹೆಚ್ಚಿನ ಮಾಹಿತಿ ಬೇಕಾದರೆ ಸುರ್ಜೇವಾಲಾರನ್ನೇ ಕೇಳಿ ಎಂದು ಹೇಳುತ್ತಿದ್ದಾರೆ. . ಸಿದ್ದರಾಮಯ್ಯನವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದು ಸಿ ಮಹದೇವಪ್ಪ ಹೇಳುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಕೆ.ಎನ್ ರಾಜಣ್ಣ ಅವರು ಸಿದ್ದರಾಮಯ್ಯ ಮುಂದಿನ 5 ವರ್ಷವೂ ಸಿಎಂ ಆಗಿ ಅವರೇ ಇರುತ್ತಾರೆ. ಸಚಿವರಾಗಿ ಕೆಲಸ ಮಾಡುವುದಕ್ಕಿಂತ ಬೇರೆ ಆಸಕ್ತಿ ಜಾಸ್ತಿ ಎಂದು ಡಿಕೆ ಸುರೇಶ್ ಹೇಳುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಅವರು ನಾನು ಫುಟ್‌ಬಾಲ್ ಆಡೋಕೆ ಬಂದಿಲ್ಲ, ಸನ್ಯಾಸಿನೂ ಅಲ್ಲ. ಚೇಸ್ ಆಡೋದು ಗೊತ್ತಿದೆ. ಸುರ್ಜೇವಾಲಾ – ನಾನೇ ಇಲ್ಲಿ ‘ಸೂಪರ್ ಸಿಎಂ’ ನಾನೇ ಕಲೆಕ್ಷನ್ ಏಜೆಂಟ್ ಇವರೆಲ್ಲಾ ನನ್ನ ಕೈಗೊಂಬೆಗಳು ಅಷ್ಟೇ ಎಂದು ಹೇಳುತ್ತಿದ್ದಾರೆ. ಒಬ್ಬರ ಚೆಸ್, ಮತ್ತೊಬ್ಬರ ಫುಟ್ಬಾಲ್ ಆಟಕ್ಕೆ ರಾಜ್ಯ ಮೈದಾನವಾಗಿರುವುದು ದುರಂತ! ಇವರ ನಡುವೆ ಬಡವಾಗುತ್ತಿದೆ ಕರ್ನಾಟಕ ಎಂದು ಬಿಜೆಪಿ ಲೇವಡಿ ಮಾಡಿದೆ.
ಒಂದು ತಿಂಗಳಲ್ಲೇ ಬೀದಿಗೆ ಬಂತು ಗದ್ದುಗೆಗಾಗಿ #ATMSarkara ದ ಗುದ್ದಾಟ..!
😆 @MBPatil – ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ.
😭 @DKSureshINC – ಎಂ. ಬಿ. ಪಾಟೀಲ್ ಹೇಳಿಕೆಗೆ ಹೆಚ್ಚಿನ ಮಾಹಿತಿ ಬೇಕಾದರೆ ಸುರ್ಜೇವಾಲಾರನ್ನೇ ಕೇಳಿ.😆 @CMahadevappa – ಸಿದ್ದರಾಮಯ್ಯನವರೇ ಪೂರ್ಣಾವಧಿ ಮುಖ್ಯಮಂತ್ರಿ.
😆…— BJP Karnataka (@BJP4Karnataka) June 19, 2023