ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಅನರ್ಹತೆ ಶಾಕ್ – ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಅನರ್ಹತೆ ಶಾಕ್ – ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ

ಮೊದಲ ಬಾರಿಗೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ 4 ವರ್ಷಗಳ ನಂತರ ಪ್ರಜ್ವಲ್ ರೇವಣ್ಣ ಅವರಿಗೆ ಅನರ್ಹತೆ ಶಾಕ್ ಎದುರಾಗಿದೆ. ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಆಸ್ತಿ ವಿವರ ಸಲ್ಲಿಸುವಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಪ್ರಕರಣದಲ್ಲಿ ಹೈಕೋರ್ಟ್ ನ್ಯಾ. ಕೆ. ನಟರಾಜನ್ ಪೀಠ ಸಂಸತ್ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದೆದ್ದ ಖಾಸಗಿ ಸಾರಿಗೆ ಒಕ್ಕೂಟ – ಸೆ. 11 ರಂದು ಬೆಂಗಳೂರು ಬಂದ್‌

ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕೋರ್ಟ್ ಈ ಆದೇಶ ನೀಡಿದೆ.

ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಬಗ್ಗೆ ವಿವರ ನೀಡಿಲ್ಲ ಎಂದು ದೂರು ಬಂದ ಬಳಿಕ ಪ್ರಕರಣದ ಬಗ್ಗೆ ವರದಿ ನೀಡಿದ್ದ ಅಂದಿನ ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫಾನ್ಸಿಸ್ ಅವರು ಕೂಡ ಈ ಕೇಸ್ ಆದಾಯ ತೆರಿಗೆ ಇಲಾಖೆ ತನಿಖೆಗೆ ಸೂಕ್ತ ಎಂದು ವರದಿ ನೀಡಿದ್ದ ಪರಿಣಾಮ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ಸಂಬಂಧ ಹೈಕೋರ್ಟ್‌ಗೆ ಹಾಜರಾಗಿದ್ದ ಪ್ರಜ್ವಲ್ ರೇವಣ್ಣ ಅವರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಆಸ್ತಿ ಒಟ್ಟು ಆಸ್ತಿ 7 ಕೋಟಿ 39 ಲಕ್ಷದ 21 ಸಾವಿರದ 662 ರೂಪಾಯಿ ಇದೆ ಅಂತ ಈ ಹಿಂದೆ 2019ರಲ್ಲಿ ನಾಮಪತ್ರ ಸಲ್ಲಿಸುವ ವೇಳೆ ತಿಳಿಸಿದ್ದರು. ಈ ಪೈಕಿ 3,72,53,210 ರೂಪಾಯಿ ಸಾಲಗಾರ ಅಂತ ಕೂಡ ಗೊತ್ತಾಗಿತ್ತು. 1,100 ಗ್ರಾಂ ಚಿನ್ನ, 23 ಕೆಜಿ ಬೆಳ್ಳಿ ಸೇರಿದಂತೆ 37,31,350 ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಜತೆಗೆ ಪ್ರಜ್ವಲ್ 4,45, 000 ಬೆಲೆಯ ಜಾನುವಾರು ಹೊಂದಿದ್ದಾರೆ. ಎರಡು ಎತ್ತು, 18 ಹಸು ಕೂಡ ಸಾಕಿದ್ದಾರೆ ಅಂತ ಮಾಹಿತಿ ನೀಡಿದ್ದರು. ಮೈಸೂರಿನಲ್ಲಿ 1 ಕೋಟಿ 90 ಲಕ್ಷ ಮೌಲ್ಯದ ಕಮರ್ಷಿಯಲ್ ಕಾಂಪ್ಲೆಕ್ಸ್, ಹಾಸನ, ದುದ್ದ, ಕಸಬಾ, ಹೊಳೆನರಸೀಪುರದಲ್ಲಿ 4 ಕೋಟಿ 89 ಲಕ್ಷದ 15 ಸಾವಿರದ 29 ರೂಪಾಯಿ ಮೌಲ್ಯದ ಜಮೀನು ಹೊಂದಿದ್ದೇನೆ ಎಂದು ಪ್ರಜ್ವಲ್ ರೇವಣ್ಣ ತಿಳಿಸಿದ್ದರು. ಕೋಟಿ ಕೋಟಿ ಒಡೆಯನಾದರೂ ಪ್ರಜ್ವಲ್ ಕೈ ತುಂಬ ಸಾಲ ಮಾಡಿಕೊಂಡಿದ್ದರಂತೆ. 2019ರಲ್ಲಿ ತಾಯಿ ಭವಾನಿ ಬಳಿ 43,75,000, ತಂದೆ ರೇವಣ್ಣ ಬಳಿ 1,26,36,000, ತಾತ ದೇವೇಗೌಡರಿಂದ 5 ಲಕ್ಷ ರೂ, ಅತ್ತೆ ಅನುಸೂಯ ಮಂಜುನಾಥ್ ಬಳಿ 22 ಲಕ್ಷ ರೂ. ಹಾಗೂ ಅತ್ತೆ ಶೈಲಾರಿಂದ 10,50,000 ರೂ.ಸಾಲ ಪಡೆದಿದ್ದರಂತೆ ಪ್ರಜ್ವಲ್ ರೇವಣ್ಣ. ಈ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಎ ಮಂಜು 2019ರ ಜೂನ್ 26ರಂದು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದರು. ಆದರೆ, ಹೈಕೋರ್ಟ್ ಎ. ಮಂಜು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ ಜಿ.ದೇವರಾಜೇಗೌಡ ಅವರು ಸಲ್ಲಿಸಿದ ಅರ್ಜಿ ವಿಚಾರಣೆಯಲ್ಲಿ ಈ ಮಹತ್ವದ ಆದೇಶ ನೀಡಲಾಗಿದೆ. ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಏ.26, 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಜಿ.ದೇವರಾಜೇಗೌಡ ದೂರು ನೀಡಿದ್ದರು. ಪ್ರಜ್ವಲ್‌ ರೇವಣ್ಣ ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿತ್ತು.

 

suddiyaana