ಮೇ 10ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ – ನೇರಳೆ ಮಾರ್ಗದಲ್ಲಿ ಭಾನುವಾರ ಬೆಳಗ್ಗೆ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರಿನಲ್ಲಿ ನೇರಳೆ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಈ ಸುದ್ದಿ ಓದಲೇಬೇಕು. ಭಾನುವಾರ ಬೆಳಗ್ಗೆ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳಿಂದಾಗಿ ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಡುವೆ ಸೇವೆ ಸ್ಥಗಿತಗೊಳ್ಳಲಿದೆ.
ಇದನ್ನೂ ಓದಿ:4 ದಿನ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್ ಓಪನ್ – ವಾಹನ ಸಂಚಾರ ಆರಂಭ
ಮೇ 10ರ ಭಾನುವಾರ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಕಟಣೆ ಮೂಲಕ ತಿಳಿಸಿದೆ. ಪ್ರಯಾಣಿಕರು ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಪೂರ್ವಯೋಜನೆ ಮಾಡಿಕೊಳ್ಳುವಂತೆ ಬಿಎಂಆರ್ಸಿಎಲ್ ವಿನಂತಿಸಿಕೊಂಡಿದೆ. ಭಾನುವಾರದಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜ್ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಾಗಿ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯು ತಾತ್ಕಾಲಿಕವಾಗಿ ಎರಡು ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ 7 ಗಂಟೆಯಿಂದ ಗಂಟೆಯಿಂದ 9ಎ ವರೆಗೆ ಸ್ಥಗಿತಗೊಳ್ಳಲಿದೆ.
ಈ ಅವಧಿಯಲ್ಲಿ ಮೆಟ್ರೋ ರೈಲು ಸೇವೆಗಳು ಸಂಬಂಧಿತ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 7 ಗಂಟೆಗೆ ನಿಯಮಿತ ವೇಳಾಪಟ್ಟಿಯಂತೆ ಪ್ರಾರಂಭವಾಗಿ, ಕೆಳಕಂಡ ಮಾರ್ಗಗಳಲ್ಲಿ ಎಂದಿನ ಸಂಚರಿಸಲಿವೆ. ಚಲ್ಲಘಟ್ಟ – ವಿಜಯನಗರ ಎಂ.ಜಿ. ರಸ್ತೆ – ವೈಟ್ಫೀಲ್ಡ್ (ಕಾಡುಗೋಡಿ) ಮಾದಾವರ – ಸಿಲ್ಕ್ ಇನ್ಸ್ಟಿಟ್ಯೂಟ್ ಆರ್.ವಿ. ರಸ್ತೆ – ಬೊಮ್ಮಸಂದ್ರ ಬೆಳಿಗ್ಗೆ 9 ಗಂಟೆಯ ನಂತರ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ – ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.

ನೋಡಿರಿ

