ಬಿಪಿಎಲ್ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿ ವಿತರಣೆ – ರಾಜ್ಯ ಸರ್ಕಾರ  

ಬಿಪಿಎಲ್ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿ ವಿತರಣೆ – ರಾಜ್ಯ ಸರ್ಕಾರ  

ಬೆಂಗಳೂರು: ಬಿಪಿಎಲ್ ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಅಕ್ಕಿ ಜೊತೆಗೆ 1 ಕೆಜಿ ಅಕ್ಕಿ ಹೆಚ್ಚುವರಿಯಾಗಿ ವಿತರಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಪಿಎಲ್‌ ಕಾರ್ಡ್ ಹೊಂದಿರುವ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ ಒಟ್ಟು 6 ಕೆಜಿ ಅಕ್ಕಿ ವಿತರಿಸಲಾಗುವುದು. ಈ ಆದೇಶ ಜನವರಿ 1ರಿಂದಲೇ ಜಾರಿಗೊಂಡಿದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ‘ವೀರ ಕಂಬಳ’ ಸಿನಿಮಾಕ್ಕಾಗಿ ಬಣ್ಣ ಹಚ್ಚಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ಚುನಾವಣೆ ಸಮೀಪದಲ್ಲಿರುವ ಹೊತ್ತಿನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು‌ ಸಮಾವೇಶವೊಂದರಲ್ಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಡಿತರದಾರರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ಸದ್ಯ ನೀಡುತ್ತಿರುವ 5 ಕೆಜಿ ಅಕ್ಕಿ ಜೊತೆಗೆ 1 ಕೆಜಿ ಹೆಚ್ಚುವರಿ ಅಕ್ಕಿ ನೀಡುವುದಾಗಿ ಆದೇಶ ಹೊರಡಿಸಿದ್ದಾರೆ.

suddiyaana