ನನಗೆ ಪಕ್ಷದ ಕಾರ್ಯಕರ್ತನಾಗಿರಲು ಇಷ್ಟ -ನಾನು ಡಿಸಿಎಂ ಆಗಿಯೇ ಇರುತ್ತೇನೆಂದ ಡಿಕೆಶಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗೆ ಇನ್ನೂ ಕೂಡ ಬ್ರೇಕ್ ಬಿದ್ದಿಲ್ಲ. ಇದೀಗ ದೆಹಲಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಊಹಾಪೋಹಗಳು ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ ಪಕ್ಷದ ಹೈಕಮಾಂಡ್ ಜೊತೆ ಸಭೆಯ ಬಗ್ಗೆಯೂ ಹೇಳಿಕೆ ನೀಡಿದ್ದು ತಾವು ಯಾರನ್ನೂ ಭೇಟಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತನಾಗಿರಲು ಇಷ್ಟ ಎಂದು ಹೇಳಿದ್ದಾ
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಮಹಿಳಾ ಸಾರಿಗೆ ನೌಕರರಿಗೆ ಬಂಪರ್ ಗಿಫ್ಟ್! – ವರ್ಷಕ್ಕೆ 12 ದಿನ ವೇತನ ಸಹಿತ ರಜೆ ಹೆಚ್ಚಳ!
ದೆಹಲಿಯಲ್ಲಿ ಮಾತನಾಡಿ ನನಗೆ ಉಪಮುಖ್ಯಮಂತ್ರಿಯಾಗಿ ಮುಂದುವರೆಯಲು ಸಂತೋಷವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ರು. ನಾನು ಯಾವಾಗಲೂ ಪಕ್ಷದ ಕಾರ್ಯಕರ್ತನಾಗಿರಲು ಇಷ್ಟಪಡುತ್ತೇನೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಅಧಿಕಾರ ಹಂಚಿಕೆ ಸಂಧಾನ ನಡೆದಿದೆ ಎನ್ನಲಾಗುತ್ತಿದ್ದು, ಆದರೆ ಡಿ.ಕೆ ಶಿವಕುಮಾರ್ ಈ ಚರ್ಚೆಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಇನ್ನೂ ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಭೆ ಇದೆ ಎಂಬ ಮಾತುಗಳು ಬರುತ್ತಿವೆ. ಆದರೆ ನಾನು ಯಾರನ್ನೂ ಭೇಟಿಯಾಗುತ್ತಿಲ್ಲ. ನಾನು ಉಪಮುಖ್ಯಮಂತ್ರಿಯಾಗಿ ಮುಂದುವರೆಯಲು ಸಂತೋಷವಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದು, ಹೊಸ ಚರ್ಚೆಯನ್ನ ಹುಟ್ಟುಹಾಕಿದೆ. . ಪಕ್ಷದ ಕಾರ್ಯಕರ್ತನಾಗಿ ಇರಲು ಇಷ್ಟಪಡುವುದಾಗಿ ತಿಳಿಸಿದ ಡಿಕೆಶಿ, 1990ರ ದಶಕದಿಂದಲೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ನೆನಪಿಸಿಕೊಂಡಿದ್ದಾರೆ.

ನೋಡಿರಿ

